ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

Date:

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ. ಈ ಆದೇಶವನ್ನು ಖಂಡಿಸಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ‘ಇದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಸಂವಿಧಾನದ ಮೇಲಿನ ದಾಳಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ, “ಸಮಾಜದಲ್ಲಿ ಜಾತಿ – ಧರ್ಮದ ಆಧಾರದ ಮೇಲೆ ವಿಭಜನೆ ಸೃಷ್ಟಿಸುವುದು ಸಂವಿಧಾನಬಾಹಿರವೂ, ಅಪರಾಧವೂ ಆಗಿದೆ. ಸರ್ಕಾರವು ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು.  ಆದೇಶ ಹೊರಡಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ನಮ್ಮ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಜಾತಿ, ಧರ್ಮ, ಭಾಷೆ ಅಥವಾ ಇನ್ನಾವುದೇ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಖಾತರಿಪಡಿಸುತ್ತದೆ. ಉತ್ತರ ಪ್ರದೇಶದಲ್ಲಿ ತಳ್ಳುಗಾಡಿಗಳು, ಗೂಡಂಗಡಿಗಳು ಹಾಗೂ ಅಂಗಡಿಗಳ ಮಾಲೀಕರ ಹೆಸರುಳ್ಳ ಫಲಕಗಳನ್ನು ಹಾಕಬೇಕೆಂಬ ವಿಭಜನೆಯ ಆದೇಶವು ನಮ್ಮ ಸಂವಿಧಾನ, ನಮ್ಮ ಪ್ರಜಾಪ್ರಭುತ್ವ ಮತ್ತು ನಮ್ಮ ಬಹುತ್ವದ ಪರಂಪರೆಯ ಮೇಲಿನ ದಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಧಾರ್ಮಿಕ ಯಾತ್ರೆಯ ಸಮಯದಲ್ಲಿ ಅಂಗಡಿಗಳ ಮಾಲೀಕರು ತಮ್ಮ ಹೆಸರುಳ್ಳು ಫಲಕಗಳನ್ನು ಹಾಕುವಂತೆ ಆದೇಶಿಸಿರುವ ಮುಜಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್, “ಕಾವಡ್ ಯಾತ್ರೆಗೆ ಸಿದ್ಧತೆಗಳು ಪ್ರಾರಂಭವಾಗಿವೆ. ನಮ್ಮ ಸುಮಾರು 240 ಕಿ.ಮೀ ವ್ಯಾಪ್ತಿಯಲ್ಲಿ, ಎಲ್ಲ ತಿನಿಸುಗಳು, ಹೋಟೆಲ್‌ಗಳು, ಧಾಬಾಗಳು ಮತ್ತು ಬೀದಿಬದಿ ತಳ್ಳು ಗಾಡಿಗಳ ಮಾಲೀಕರು ತಮ್ಮ ಹೆಸರುಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸಲು ಸೂಚಿಸಲಾಗಿದೆ. ಕಾವಡ್ ಯಾತ್ರೆಯಲ್ಲಿ ಭಾಗವಹಿಸುವವರಿಗೆ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಇದನ್ನು ಮಾಡಲಾಗುತ್ತಿದೆ. ಹೀಗೆ ಮಾಡುವುದರಿಂದ, ಮುಂದಿನ ದಿನಗಳಲ್ಲಿ ಯಾವುದೇ ಆಪರಾಧಗಳು ಉದ್ಭವಿಸುವುದಿಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ನೆರವಾಗುತ್ತದೆ” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮವನ್ನು ಖಂಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಮುಸ್ಲಿಂ ಮಾಲೀಕರ ಅಂಗಡಿಯಿಂದ ಯಾವುದೇ ‘ಕಾವಡ್’ ಯಾತ್ರೆಯಲ್ಲಿ ಭಾಗಿಯಾಗುವವರು ಯಾವುದೇ ಪದಾರ್ಥವನ್ನು ಖರೀದಿಸಬಾರದು ಎಂಬುದನ್ನು ಖಾತ್ರಿಪಡಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...