ನಮ್ಮ ಹಿಂದುತ್ವ ಮನೆ ಒಲೆ ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

Date:

ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ನಡುವಿನ ವ್ಯತ್ಯಾಸವನ್ನು ವಿವರಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, “ನಮ್ಮ ಹಿಂದುತ್ವ ಜನರ ಮನೆಯಲ್ಲಿ ಒಲೆಯನ್ನು ಹೊತ್ತಿಸುವಂತದ್ದು, ಆದರೆ ಬಿಜೆಪಿಯ ಹಿಂದುತ್ವವು ಜನರ ಮನೆಗಳನ್ನೇ ಸುಡುವಂತದ್ದು” ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, “ಬಿಜೆಪಿಯ ಹಿಂದುತ್ವಕ್ಕೂ ನಮ್ಮ ಹಿಂದುತ್ವಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ಎಂದು ಪ್ರತಿಪಾದಿಸಿದ್ದಾರೆ. ಜೊತೆಗೆ ವ್ಯತ್ಯಾಸವನ್ನೂ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಸರ್ಕಾರವು ನಮ್ಮ ಪಕ್ಷದ ವಿರುದ್ಧ ಭಾರತದ ಚುನಾವಣಾ ಆಯೋಗವನ್ನು ಬಳಸಿತ್ತು. ನಮ್ಮ ಬಿಲ್ಲು ಬಾಣವನ್ನೇ ಕಸಿದು ಯುದ್ಧ ಘೋಷಿಸಲಾಗಿದೆ. ನೀವು (ಪಿಎಂ ಮೋದಿ) ನನ್ನ ಪಕ್ಷ, ನನ್ನ ಚಿಹ್ನೆ ಮತ್ತು ನನ್ನ ಜನರನ್ನು ಕಿತ್ತುಕೊಂಡಿದ್ದೀರಿ. ಆದರೆ ನೀವು ಇನ್ನೂ ಉದ್ಧವ್ ಠಾಕ್ರೆಗೆ ಭಯಪಡುತ್ತೀರಾ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿ ಬಾಗಿಲು ತೆರೆದರೂ ಹಿಂದಿರುಗಿ ಹೋಗಲ್ಲ: ಉದ್ಧವ್ ಠಾಕ್ರೆ

ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿದೆ ಎಂದು ಹೇಳುವ ಸರ್ಕಾರದ ವರದಿ ಬಗ್ಗೆಯೂ ಶಿವಸೇನೆ ನಾಯಕ ಮಾತನಾಡಿದರು. “ಕಳೆದ ದಶಕದಿಂದ ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾಗಿದ್ದಾರೆ. ಮುಸ್ಲಿಂ ಜನಸಂಖ್ಯೆಯ ಈ ಹೆಚ್ಚಳವೇ ಅವರ ಸಾಧನೆಯೇ ಅಥವಾ ವೈಫಲ್ಯವೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಮುಸ್ಲಿಂ ಜನಸಂಖ್ಯೆಯ ಹೆಚ್ಚಳಕ್ಕೆ ಅವರನ್ನು ಪ್ರಶಂಸಿಸಬೇಕೆ ಅಥವಾ ಟೀಕಿಸಬೇಕೆ ಎಂದು ನಾವೆಲ್ಲರೂ ಗೊಂದಲಕ್ಕೊಳಗಾಗಿದ್ದೇವೆ” ಎಂದು ಕುಟುಕಿದರು.

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಂದ ಬಿಜೆಪಿ ಸರ್ಕಾರ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಂಡಿದೆ. ಕೇಜ್ರಿವಾಲ್‌ಗೆ ಜಾಮೀನು ಸಿಕ್ಕಿದೆ, ಆದರೆ ಮೋದಿ ಸರ್ಕಾರ ಕೇಜ್ರಿವಾಲ್‌ ಅವರ ಎಲ್ಲಾ ಅಧಿಕಾರವನ್ನು ಕಿತ್ತುಕೊಂಡಿದೆ” ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಯಾವ ಫೈಲ್ ತೆರೆದಿದೆ: ಬಿಜೆಪಿಗೆ ‘ಬೇಷರತ್’ ಬೆಂಬಲ ಘೋಷಿಸಿದ ರಾಜ್ ಠಾಕ್ರೆಗೆ ರಾವತ್ ಟಾಂಗ್

“ಜೂನ್ 4 ರವರೆಗೆ ಮೋದಿ ಅವರ ನಾಟಕ ನಡೆಯಲಿದೆ. ಜೂನ್ 4 ರ ನಂತರ ಪ್ರಧಾನಿ ಮೋದಿ ಎಂದು ಕರೆಯಲಾಗುವುದಿಲ್ಲ, ನರೇಂದ್ರ ಮೋದಿ ಅವರೆಂದು ಕರೆಯಬೇಕಾಗುತ್ತದೆ” ಎಂದು ಹೇಳುವ ಮೂಲಕ ಇಂಡಿಯಾ ಒಕ್ಕೂಟದ ಗೆಲುವಿನ ಭರವಸೆ ವ್ಯಕ್ತಪಡಿಸಿದರು.

ದೇಶದಲ್ಲಿ ಲೋಕ ಚುನಾವಣೆಯ ನಾಲ್ಕನೇ ಹಂತದ ಮತದಾನ ಮೇ 13ರಂದು ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...