ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

Date:

ಸರ್ಕಾರಿ ಸ್ವಾಮ್ಯದ ಉದ್ಯಮಗಳಲ್ಲಿ(ಪಿಎಸ್‌ಯು) ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, “ಕೆಲವೇ ಕೆಲವು ‘ಆಪ್ತ ಬಂಡವಾಳಶಾಹಿ ಸ್ನೇಹಿತರ’ ಲಾಭಕ್ಕಾಗಿ ಕೇಂದ್ರ ಸರ್ಕಾರ ಲಕ್ಷಗಟ್ಟಲೆ ಯುವಕರ ಭರವಸೆಯನ್ನು ತುಳಿದುಹಾಕಿದೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳು ಭಾರತದ ಹೆಮ್ಮೆ ಹಾಗೂ ಉದ್ಯೋಗಕ್ಕಾಗಿ ಪ್ರತಿಯೊಬ್ಬ ಯುವಕನ ಕನಸಾಗಿದ್ದವು. ಆದರೆ, ಇಂದು ಅವು ಸರ್ಕಾರದ ಆದ್ಯತೆಯಾಗಿ ಉಳಿದಿಲ್ಲ” ಎಂದು ಟೀಕಿಸಿದರು.

“ದೇಶದ ಪಿಎಸ್‌ಯುಗಳಲ್ಲಿ ಉದ್ಯೋಗಾವಕಾಶವು 2014 ರಲ್ಲಿ 16.9 ಲಕ್ಷದಿಂದ 2022 ರಲ್ಲಿ 14.6 ಲಕ್ಷಕ್ಕೆ ಇಳಿದಿದೆ. ಬಿಎಸ್‌ಎನ್ಎಲ್‌ನಲ್ಲಿ 1,81,127, ಎಸ್‌ಎಐಎಲ್‌ನಲ್ಲಿ 61,928, ಎಂಟಿಎನ್ಎಲ್‌ನಲ್ಲಿ 34,997; ಎಸ್‌ಇಸಿಎಲ್‌ನಲ್ಲಿ 29,140; ಎಫ್‌ಸಿಐನಲ್ಲಿ 28,063; ಒಎನ್‌ಜಿಸಿಯಲ್ಲಿ 21,120 ಉದ್ಯೋಗಗಳು ಕಡಿತಗೊಂಡಿವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಸುಳ್ಳು ಭರವಸೆಗಳನ್ನು ನೀಡಿದವರು, ಉದ್ಯೋಗಗಳನ್ನು ಹೆಚ್ಚಿಸುವ ಬದಲು ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಿದ್ದಾರೆ. ಇದರೊಂದಿಗೆ, ಈ ಸಂಸ್ಥೆಗಳಲ್ಲಿ ಗುತ್ತಿಗೆ ನೇಮಕಾತಿಗಳನ್ನು ದ್ವಿಗುಣಗೊಳಿಸಲಾಗಿದೆ. ಗುತ್ತಿಗೆ ನೌಕರರನ್ನು ಹೆಚ್ಚಿಸುವುದು ಸಾಂವಿಧಾನಿಕ ಮೀಸಲಾತಿಯ ಹಕ್ಕನ್ನು ಕಸಿದುಕೊಳ್ಳುವ ಮಾರ್ಗವಲ್ಲವೇ? ಇದು ಈ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಷಡ್ಯಂತ್ರವೇ?’ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಜನರ ಭಾವನೆಗಳಿಗೆ ಧಕ್ಕೆ; ‘ಆದಿಪುರುಷ್’ ಚಿತ್ರದ ವಿರುದ್ಧ ಕಾಂಗ್ರೆಸ್, ಎಎಪಿ, ಶಿವಸೇನೆ ಆಕ್ರೋಶ

“ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮತ್ತು ಪಿಎಸ್‌ಯುಗಳಿಂದ ಸರ್ಕಾರಿ ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ. ಇದು ಯಾವ ರೀತಿಯ ‘ಅಮೃತ ಕಾಲ’. ಇದು ನಿಜವಾಗಿಯೂ ‘ಅಮೃತ ಕಾಲ’ ಆಗಿದ್ದರೆ, ಉದ್ಯೋಗಗಳು ಏಕೆ ಈ ರೀತಿ ಕಣ್ಮರೆಯಾಗುತ್ತಿವೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

“ದೇಶದ ಪಿಎಸ್‌ಯುಗಳು ಸರಿಯಾದ ವಾತಾವರಣ ಮತ್ತು ಸರ್ಕಾರದಿಂದ ಬೆಂಬಲ ಪಡೆದರೆ, ಅವು ಆರ್ಥಿಕತೆ ಮತ್ತು ಉದ್ಯೋಗ ಎರಡನ್ನೂ ಉತ್ತೇಜಿಸಲು ಸಮರ್ಥವಾಗಿವೆ. ಪಿಎಸ್‌ಯುಗಳು ದೇಶದ ಮತ್ತು ಜನರ ಆಸ್ತಿಯಾಗಿದ್ದು, ಭಾರತದ ಅಭಿವೃದ್ಧಿಯ ಹಾದಿಯನ್ನು ಬಲಪಡಿಸಲು ಅವುಗಳನ್ನು ಉತ್ತೇಜಿಸಬೇಕು” ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...