ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಸೋನಿಯಾ ಗಾಂಧಿ ಮನೆ ಮುಂದೆ ಬಿಜೆಪಿ ಕೇರಳ ಯುವ ಮೋರ್ಚಾ ಪ್ರತಿಭಟನೆ

Date:

ದಕ್ಷಿಣ ರಾಜ್ಯದ ಶಬರಿಮಲೆ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ ಕೇರಳ ಘಟಕವು ಶುಕ್ರವಾರ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಮನೆ ಮುಂದೆ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಹಿಸಿದ್ದು, “ಸೋನಿಯಾ ಗಾಂಧಿ ಮತ್ತು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ನಡುವಿನ ಮಾತುಕತೆ ನಡೆದಿದೆ ಎಂಬ ಆರೋಪಗಳು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ದೇವಸ್ವಂ ಅಧಿಕಾರಿ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವಸ್ಥಾನದಿಂದ ಚಿನ್ನ ಕಳ್ಳತನವಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಿಷ್ಪರಿಣಾಮಕಾರಿಯಾಗಿದೆ” ಎಂದು ಆರೋಪಿಸಿದ್ದು, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದರು.

“ಕಾಂಗ್ರೆಸ್ ಹೈಕಮಾಂಡ್ ಅಯ್ಯಪ್ಪ ದೇವರ ಚಿನ್ನ ಕದ್ದವರೊಂದಿಗೆ ನೇರ ಸಂಪರ್ಕ ಹೊಂದಿದೆ. ಸೋನಿಯಾ ಗಾಂಧಿ ಮತ್ತು ಅವರ ಕುಟುಂಬವು ಕೋಟ್ಯಂತರ ಅಯ್ಯಪ್ಪ ಭಕ್ತರ ಮುಂದೆ ಇದಕ್ಕೆ ಉತ್ತರಿಸಬೇಕು” ಎಂದು ಠಾಕೂರ್ ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಏನಿದು ಪ್ರಕರಣ, ಸೋನಿಯಾ ಗಾಂಧಿ ಹೆಸರು ಯಾಕೆ?

ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲಿನ ಚೌಕಟ್ಟುಗಳು, ದ್ವಾರಪಾಲಕ ಮೂರ್ತಿಗಳು ಮತ್ತು ಧ್ವಜಸ್ತಂಭಕ್ಕೆ ಹಚ್ಚಲಾಗಿದ್ದ ಚಿನ್ನವನ್ನು ಕಳವು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಗರ್ಭಗುಡಿಯ ಚಿನ್ನದ ಲೇಪಿತ ತಾಮ್ರದ ಫಲಕಗಳನ್ನು ತೆಗೆಯಲಾಗಿತ್ತು ಮತ್ತು ಅವುಗಳನ್ನು ಮರಳಿ ತಂದಾಗ ಅಸಲಿ ಚಿನ್ನ ನಾಪತ್ತೆಯಾಗಿರುವುದು ವಿಶೇಷ ತನಿಖಾ ತಂಡದ (SIT) ಗಮನಕ್ಕೆ ಬಂದಿದೆ.

ಈ ಪ್ರಕರಣದ ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೋಟಿ ಮತ್ತು ಕದ್ದ ಚಿನ್ನವನ್ನು ಖರೀದಿಸಿದ ಆರೋಪ ಹೊತ್ತಿರುವ ಜ್ಯುವೆಲ್ಲರಿ ಮಾಲೀಕ ಗೋವರ್ಧನ್ ಅವರು ಸೋನಿಯಾ ಗಾಂಧಿಯವರ ದೆಹಲಿಯ ನಿವಾಸದಲ್ಲಿ ಅವರನ್ನು ಭೇಟಿಯಾಗಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇದನ್ನು ಓದಿದ್ದೀರಾ? ಶಬರಿಮಲೆ ಚಿನ್ನದ ಅವ್ಯವಹಾರ ಪ್ರಕರಣ: ಕೇರಳ, ಕರ್ನಾಟಕ, ತಮಿಳುನಾಡು ಸೇರಿ 21 ಕಡೆ ಇ.ಡಿ ದಾಳಿ

ಕೇರಳದಲ್ಲಿ ಶೀಘ್ರವೇ ಚುನಾವಣೆ ನಡೆಯಲಿರುವ ಕಾರಣ ಸದ್ಯ ರಾಜಕೀಯ ಚರ್ಚೆಯೂ ಅಧಿಕವಾಗಿದೆ. ಕೇರಳದ ಎಡರಂಗ ಸರ್ಕಾರವು (LDF) ಈ ಫೋಟೋಗಳನ್ನು ಬಳಸಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಫೋಟೋಗಳನ್ನು ಉಲ್ಲೇಖಿಸಿ, “ಅತ್ಯಂತ ಭದ್ರತೆ ಇರುವ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ಸಾಮಾನ್ಯರಿಗೂ ಮತ್ತು ಅನೇಕ ರಾಜಕಾರಣಿಗಳಿಗೂ ಅವಕಾಶ ಸಿಗುವುದಿಲ್ಲ. ಅಂತಹದರಲ್ಲಿ ಈ ಆರೋಪಿಗಳಿಗೆ ಭೇಟಿ ಮಾಡುವ ಅವಕಾಶ ಹೇಗೆ ಸಿಕ್ಕಿತು” ಎಂದು ಪ್ರಶ್ನಿಸಿದ್ದಾರೆ.

ಇವೆಲ್ಲವುದರ ನಡುವೆ ಕಾಂಗ್ರೆಸ್ ನಾಯಕರು ಈ ಆರೋಪಗಳನ್ನು ಅಲ್ಲಗಳೆದಿದ್ದು, ಪ್ರಕರಣದ ದಿಕ್ಕು ತಪ್ಪಿಸಲು ಹಳೆಯ ಫೋಟೋಗಳನ್ನು ಬಳಸಲಾಗುತ್ತಿದೆ ಎಂದು ವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...