ಶಾಸಕ, ಸಂಸದರಿಗೆ ಲಂಚ ಪ್ರಕರಣದಿಂದ ವಿನಾಯಿತಿಗೊಳಿಸುವ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Date:

ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

“ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಏಳು ಸದಸ್ಯರ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕ ಸದಸ್ಯರು ಪಡೆಯುವ ಲಂಚ ಹಾಗೂ ಭ್ರಷ್ಟಾಚಾರವು ಸಾರ್ವಜನಿಕ ಜೀವನದಲ್ಲಿನ ಪ್ರಾಮಾಣಿಕತೆಯನ್ನು ಹಾಳುಗೆಡುವುತ್ತದೆ. ವಿವಾದದ ಎಲ್ಲ ಅಂಶಗಳಿಂದ ನಾವು ಸ್ವತಂತ್ರವಾಗಿ ತೀರ್ಪು ನೀಡಿದ್ದೇವೆ. ಸಂಸದರು ವಿನಾಯಿತಿಯಿಂದ ಸಂತಸ ಪಡುತ್ತಾರೆಯೆ? ಬಹುತೇಕ ಈ ಅಂಶವನ್ನು ಒಪ್ಪುವುದಿಲ್ಲ,  ರದ್ದುಗೊಳಿಸುತ್ತೇವೆ” ಎಂದು ಹೇಳಿದರು.

1998ರ ತೀರ್ಪಿನಲ್ಲಿ ಐದು ಸದಸ್ಯರ ಪೀಠವು ಸಂವಿಧಾನದ 105(2) ಹಾಗೂ 194(2)ರ ವಿಧಿಗಳಿಂದ ನೀಡಲಾದ ಸವಲತ್ತುಗಳ ಅಡಿಯಲ್ಲಿ ಶಾಸಕರು ಮತ್ತು ಸಂಸದರು ಭಾಷಣ ಹಾಗೂ ಮತ ಪಡೆಯಲು ನೀಡುವ ಲಂಚಕ್ಕೆ ವಿನಾಯಿತಿ ನೀಡುವ ಕಾನೂನು ನೀಡಿ ತೀರ್ಪು ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಆದಾಗ್ಯೂ, 2012ರ ಮನವಿಯಲ್ಲಿ ಜೆಎಂಎಂ ನಾಯಕ ಸೀತಾ ಸೊರೆನ್ ರಾಜ್ಯಸಭೆಯಲ್ಲಿ ಮತ ಪಡೆಯಲು ಲಂಚ ಸ್ವೀಕರಿಸಿದ್ದಕ್ಕೆ ಆರೋಪಿಸಲಾಗಿತ್ತು. ಇವರು 105ರ ವಿಧಿಯಡಿ ವಿನಾಯಿತಿ ಕೋರಿದ್ದರು. ಅರ್ಜಿದಾರರ ಮನವಿಯನ್ನು ಜಾರ್ಖಂಡ್‌ ಕೋರ್ಟ್ ವಜಾಗೊಳಿಸಿತ್ತು. ನಂತರ ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ 7 ಸದಸ್ಯರ ಪೀಠವು ಅಟಾರ್ನಿ ಜನರಲ್, ಸಾಲಿಸಿಟರ್ ಜನರಲ್ ಮತ್ತು ಅಮಿಕಸ್ ಕ್ಯೂರಿ ಪಿ.ಎಸ್.ಪಟ್ವಾಲಿಯಾ ಸೇರಿದಂತೆ ವಕೀಲರ ತಂಡ ಎರಡು ದಿನಗಳ ಸುದೀರ್ಘ ವಾದಗಳನ್ನು ಮಂಡಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಏಳು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಎಂ.ಎಂ.ಸುಂದರೇಶ್, ಪಿ.ಎಸ್.ನರಸಿಂಹ, ಜೆ.ಬಿ.ಪರ್ಡಿವಾಲ, ಸಂಜಯ್ ಕುಮಾರ್ ಮತ್ತು ಮನೋಜ್ ಮಿಶ್ರಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...