ಪಹಲ್ಗಾಮ್ ದಾಳಿ | ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ದಾಳಿಪೀಡಿತ ಸ್ಥಳದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ” ಎಂದು ಹೇಳಿದ್ದಾರೆ.

“ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...