ಪಾಕಿಸ್ತಾನ ಜಿಂದಾಬಾದ್ | ಸದನದಲ್ಲಿ ಬಿಜೆಪಿ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

Date:

ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ‌ ಎನ್ನಲಾಗಿರುವ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ ಬುಧವಾರದ ಕಲಾಪದಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿತು. ಪರಿಣಾಮ ಕಲಾಪವನ್ನು ಗುರುವಾರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಮುಂದೂಡಿದರು.

ರಾಜ್ಯಸಭಾ ಚುನಾವಣೆ ನಡೆದು ಕಾಂಗ್ರೆಸ್​ನ ಮೂವರು ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ವೇಳೆ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ‘ಪಾಕಿಸ್ತಾನ ಜಿಂದಾಬಾದ್‌’ ಹೇಳಿಯನ್ನು ನಾಸಿರ್‌ ಹುಸೇನ್‌ ಬೆಂಬಲಿಗರು ಕೂಗಿದ್ದಾರೆ ಎಂದು ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸಿದವು.

ಅಷ್ಟೇ ಬೇಕಾಗಿದ್ದ ಬಿಜೆಪಿ ರಾಜಕೀಯ ಲಾಭಕ್ಕಾಗಿ ಪ್ರಕರಣಕ್ಕೆ ಜೋತು ಬಿದ್ದು, ಪ್ರತಿಭಟನೆಗೆ ಮುಂದಾಗಿದೆ. ಗುರುವಾರ ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ಬಿಜೆಪಿ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...