ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡ ಪಾಕಿಸ್ತಾನ ಪ್ರಜೆ, ಕೇಂದ್ರ ಗುಪ್ತಚರ ಇಲಾಖೆ ವಿಫಲ: ಪರಮೇಶ್ವರ್ ಆರೋಪ

Date:

ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್​​ಪೋರ್ಟ್​ ಮಾಡಿಕೊಳ್ಳುತ್ತಾರೆ ಎಂದರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದೇ ಅರ್ಥ ಎಂದು ಗೃಹ ಸಚಿವ ಜಿ ಪರಮೇಶ್ವರ್ ಆರೋಪ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚಲಿದ್ದಾರೆ” ಎಂದು ತಿಳಿಸಿದರು.

ಮುಡಾ ಹಗರಣ ಸಂಬಂಧ ಬಿಜೆಪಿ ಎರಡನೇ ಹಂತದ ಹೋರಾಟ ನಡೆಸಲು ಮುಂದಾಗಿದೆ ಎಂಬ ವಿಚಾರವಾಗಿ ಮಾತನಾಡಿ, “ಪ್ರತಿಪಕ್ಷದವರು ಸರ್ಕಾರಕ್ಕೆ ಸಲಹೆ ಸೂಚನೆ ಕೊಡಬೇಕು. ಇದನ್ನು ಬಿಟ್ಟು ಅವರು ರಾಜಕಾರಣ ಮಾಡುತ್ತಿದ್ದಾರೆ. ಮುಡಾ ಹಗರಣ ತನಿಖೆಗೆ ನ್ಯಾಯಾಲಯ ಆದೇಶ ನೀಡಿದೆ, ತನಿಖೆ ನಡೆಯುತ್ತಿದೆ. ಇಡಿ ನೋಟಿಸ್ ಕೊಟ್ಟಿದೆ. ಇದನ್ನು ರಾಜಕಾರಣಕ್ಕೆ ಉಪಯೋಗಿಸುತ್ತಿದ್ದಾರೆ. ಸರ್ಕಾರ ಸಮರ್ಥವಾಗಿದೆ ಪ್ರತ್ಯುತ್ತರ ಕೊಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸತೀಶ್​ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, “ಸತೀಶ್ ಜಾರಕಿಹೊಳಿ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಸಂಸದೆಯಾಗಿದ್ದಾರೆ. ಪುತ್ರಿಗೆ ಕ್ವಾರ್ಟರ್ಸ್ ಬೇಕು ಅನ್ನೋ ಕಾರಣಕ್ಕೆ ದೆಹಲಿಗೆ ಹೋಗಿದ್ದರು. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿ ಮಾಡಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣಾ ಱಲಿಯಲ್ಲಿ ಖರ್ಗೆ ಕುಸಿದು ಬಿದ್ದಿದ್ದರು. ಆರೋಗ್ಯ ವಿಚಾರಿಸಲು ಖರ್ಗೆ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...