ಪರಿಷತ್ ಚುನಾವಣೆ | ಸುಮಲತಾಗೆ ಬಿಜೆಪಿ ಟಿಕೆಟ್‌?

Date:

ಜೂನ್‌ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹಿಂದಿದ್ದು, ಮೂವರು ಅಭ್ಯರ್ಥಿಗಳು ಬಿಜೆಪಿ ಹೈಕಮಾಂಡ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. ಅದರಲ್ಲಿ, ಸಂಸದ ಸುಮಲತಾ ಹೆಸರೂ ಇದೆ ಎಂದು ಹೇಳಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆದ್ದು ಸಂಸದೆಯಾಗಿದ್ದ ಸುಮಲತಾ, ಇತ್ತೀಚೆಗೆ ಬಿಜೆಪಿ ಸೇರಿದ್ದರು. ಆದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಜೆಡಿಎಸ್‌ ಪಾಲಾದ ಮಂಡ್ಯದಲ್ಲಿ ಸುಮಲತಾ ಟಿಕೆಟ್‌ ವಂಚಿತೆಯಾಗಿದ್ದರು. ಅಲ್ಲದೆ, ಚುನಾವಣೆಯ ವೇಳೆ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಹೇಳಿದ್ದರೂ, ಚುನಾವಣಾ ಪ್ರಚಾರದಿಂದ ಕಾಣೆಯಾಗಿದ್ದರು.

ಟಿಕೆಟ್‌ ಸಿಗದ ಕಾರಣ ಅಸಮಾಧಾನಗೊಂಡಿದ್ದರೂ, ಬಿಜೆಪಿ ಹೈಕಮಾಂಡ್‌ ಒತ್ತಡಕ್ಕೆ ಮಣಿದು ಮೌನವಾಗಿದ್ದರು. ಇದೀಗ, ಅವರಿಗೆ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಅವಕಾಶ ನೀಡದೆ ಎನ್ನಲಾಗುತ್ತಿದೆ. ಸುಮಲತಾ ಜೊತೆಗೆ, ಎನ್ ರವಿಕುಮಾರ್ ಮತ್ತು ಎಂ ನಾಗರಾಜು ಅವರಿಗೂ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇಂದು (ಜೂನ್ 1) ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಬಿಜೆಪಿ ನಾಯಕತ್ವವು 15 ಮಂದಿಯ ಹೆಸರುಗಳನ್ನು ಬಿಜೆಪಿ ಹೈಕಮಾಂಡ್‌ಗೆ ಕಳಿಸಿತ್ತು. ಅವರಲ್ಲಿ ಮೂವರನ್ನು ಹೈಕಮಾಂಡ್‌ ಆಯ್ಕೆ ಮಾಡಿದೆ. ಮಹಿಳಾ ಪ್ರಾತಿನಿಧ್ಯವೂ ಇರಬೇಕೆಂದು ರಾಜ್ಯ ನಾಯಕರು ಹೇಳಿದ್ದು, ಹೀಗಾಗಿ ಸುಮಲತಾ ಹೆಸರು ಮುನ್ನೆಲೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...