ಪರಿಷತ್‌ ಚುನಾವಣೆ | ಕೈತಪ್ಪಿದ ಟಿಕೆಟ್; ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ

Date:

ವಿಧಾನ ಪರಿಷತ್‌ ಟಿಕೆಟ್‌ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಟ್ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣ, ಬಂಡಾಯದ ಬಾವುಟ ಬೀಸಿದ್ದಾರೆ.

“ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ – ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ನನ್ನ ಸ್ಪರ್ಧೆ ಪಕ್ಷ ಅಥವಾ ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ” ಎಂದು ಭಟ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷದ ವರಿಷ್ಠರು ಟಿಕೆಟ್‌ ಭರವಸೆ ನೀಡಿದ್ದರು. ಈಗ ನಿರ್ಧಾರ ಬದಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ” ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...