ಪರಿಷತ್ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಕೇವಲ ಆರಂಭವಷ್ಟೇ: ಡಿ ಕೆ ಶಿವಕುಮಾರ್

Date:

“ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕೇವಲ ಆರಂಭವಷ್ಟೇ. ಲೋಕಸಭೆ ಚುನಾವಣೆಯಲ್ಲಿ ಜನರ ಮನಸ್ಥಿತಿ ಏನು ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಸಂಜೆ ಪ್ರತಿಕ್ರಿಯೆ ನೀಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಚುನಾವಣೆಯನ್ನು ರಾಜ್ಯ ರಾಜಕೀಯದ, ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಬಣ್ಣಿಸುತ್ತಿದ್ದರು. ಇಂದು ಪ್ರಜ್ಞಾವಂತ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪುಟ್ಟಣ್ಣ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

“ರಾಜ್ಯ ಹಾಗೂ ಸರ್ಕಾರಕ್ಕೆ ಇಂದು ವಿಶೇಷವಾದ ದಿನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದಿದೆ. ಹಿಂದೆ ಪುಟ್ಟಣ್ಣ ಅವರೇ ಬಿಜೆಪಿಯಿಂದ ಗೆದ್ದಿದ್ದರು. ಅದು ಬಿಜೆಪಿಯ ಕ್ಷೇತ್ರವಾಗಿತ್ತು. ಆದರೆ ಅವರು ಈ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟು, ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿದ್ದರು. ಪುಟ್ಟಣ್ಣ ಅವರು ಸತತವಾಗಿ ಐದನೇ ಬಾರಿಗೆ ಗೆದ್ದಿದ್ದಾರೆ. ಅವರು ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿಯಲ್ಲಿ ಪ್ರಕಾಶ್ ಹುಕ್ಕೇರಿ, ಮಂಡ್ಯದಲ್ಲಿ ಮಧು ಮಾದೇಗೌಡ ಅವರು ಗೆದ್ದಿದ್ದರು. ಈ ಫಲಿತಾಂಶದ ಮೂಲಕ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಇದು ಹೆಮ್ಮೆ ತಂದಿದ್ದು, ಇವರ ಸೇವೆ ನಾವು ಮಾಡುತ್ತೇವೆ. ಪುಟ್ಟಣ್ಣ ಅವರು ಶಿಕ್ಷಕರ ಪರವಾಗಿ ಎತ್ತುವ ಧ್ವನಿಗೆ ನಾವು ಆದ್ಯತೆ ನೀಡುತ್ತೇವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಅಧಿಕಾರಿಗಳ ದುರ್ಬಳಕೆಯಾಗಿದೆ ಎಂಬ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಹೇಳಿಕೆ ಬಗ್ಗೆ ಕೇಳಿದಾಗ, “ಸೋತವರು ಏನು ಹೇಳಲು ಸಾಧ್ಯ? ಬಿದ್ದರು ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆ ಇದೆ. ಅವರು ಎಲ್ಲ ಪ್ರಯತ್ನ ಮಾಡಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಜಯ; ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮುಖಭಂಗ

ರಾಜ್ಯಸಭೆ ಚುನಾವಣೆಗೆ ಆಮಿಷ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ಶಾಸಕರು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಕೇಳಿದಾಗ, “ನನಗೂ ಈ ವಿಚಾರವಾಗಿ ಮಾಹಿತಿ ಬಂದಿವೆ. ತನಿಖಾ ತಂಡ ಇದರ ತನಿಖೆ ಮಾಡಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...