ತಮ್ಮ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಮುಂದಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಟಿಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಜ್ವಲ್ ಅವರ ಸಂಸತ್ ಸದಸ್ಯವನ್ನು ಅಸಿಂಧುಗೊಳಿಸಿ ಆದೇಶಿಸಿತ್ತು.
ತೀರ್ಪನ್ನು ಮರುಪರಿಶೀಲಿಸುವಂತೆ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಜ್ವಲ್ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.




