ಸಂಸತ್ ಭದ್ರತಾ ಲೋಪ | ವಿಪಕ್ಷಗಳಿಂದ ಗದ್ದಲ; ಉಭಯ ಸದನ ಮುಂದೂಡಿಕೆ; ಏಳು ಭದ್ರತಾ ಸಿಬ್ಬಂದಿ ಅಮಾನತು

Date:

‍ನಿನ್ನೆ ಲೋಕಸಭೆಯೊಳಗೆ ಇಬ್ಬರು ಯುವಕರು ಕಲರ್ ಸ್ಮೋಕ್ ಹಿಡಿದುಕೊಂಡು ನುಗ್ಗಿ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಉನ್ನತ ಮಟ್ಟಕ್ಕೆ ತನಿಖೆಗೆ ಹಾಗೂ ಗೃಹ ಸಚಿವ, ಪ್ರಧಾನಿ ಸದನಕ್ಕೆ ಆಗಮಿಸಿ ವಿವರಿಸುವಂತೆ ಆಗ್ರಹಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದೆ.

ಉಭಯ ಸದನಗಳಲ್ಲಿ ಸದನ ಆರಂಭವಾಗುತ್ತಿದ್ದಂತೆಯೇ ಘೋಷಣೆಗಳನ್ನು ಕೂಗಿದ ವಿಪಕ್ಷಗಳ ಸದಸ್ಯರು, ಇಷ್ಟು ದೊಡ್ಡ ಭದ್ರತಾ ಲೋಪವಾಗಿದ್ದರೂ ಕೇಂದ್ರ ಸರ್ಕಾರ ಚರ್ಚೆಗೆ ಸಿದ್ದವಾಗಿಲ್ಲ. ಚರ್ಚೆ ನಡೆಸುವಂತೆ ಪಟ್ಟು ಹಿಡಿದರು.

ಲೋಕಸಭೆಯಲ್ಲಿ ಇದಕ್ಕೆ ಉತ್ತರಿಸಿದ ಸ್ಫೀಕರ್ ಓಂ ಪ್ರಕಾಶ್ ಬಿರ್ಲಾ, “ಲೋಕಸಭೆ ಭದ್ರತಾ ಲೋಪ ಘಟನೆಯಿಂದ ನಾವೆಲ್ಲರೂ ಚಿಂತಿತರಾಗಿದ್ದೇವೆ. ಸಂಸತ್ತಿನ ಭದ್ರತೆಯ ಜವಾಬ್ದಾರಿ ಸಂಸತ್ತಿನ ಕಾರ್ಯದರ್ಶಿಯದ್ದಾಗಿದೆ. ನಾವು ಘಟನೆಯ ಬಗ್ಗೆ ಚರ್ಚಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಒಪ್ಪದೇ ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಅನಿವಾರ್ಯವಾಗಿ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರೆ, ರಾಜ್ಯಸಭೆಯನ್ನು ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ತಮ್ಮ ಕಚೇರಿಗೆ ಆಗಮಿನಿಸುವಂತೆ ಪ್ರತಿಪಕ್ಷ ನಾಯಕರಿಗೆ ತಿಳಿಸಿದರು.

ಸಭೆ ನಡೆಸಿದ ಇಂಡಿಯಾ ಮೈತ್ರಿಕೂಟ

ಸಂಸತ್ತಿನ ಭದ್ರತೆಯಲ್ಲಿನ ಉಲ್ಲಂಘನೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಇಂಡಿಯಾ ಮೈತ್ರಿಕೂಟ, ಉಭಯ ಸದನಗಳಲ್ಲಿ ಚರ್ಚಿಸುವ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಹಲವು ಕಾಂಗ್ರೆಸ್ ಸಂಸದರು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸದನದ ಇತರ ಎಲ್ಲ ಕಲಾಪಗಳನ್ನು ಬದಿಗಿಟ್ಟು ಚರ್ಚಿಸಲು ಮುಂದೂಡುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೇ, ಭದ್ರತಾ ವಿಷಯದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಇಂಡಿಯಾ ಮೈತ್ರಿಕೂಟ ಯೋಚಿಸಿರುವುದಾಗಿ ವರದಿಯಾಗಿದೆ.

ಏಳು ಮಂದಿ ಭದ್ರತಾ ಸಿಬ್ಬಂದಿ ಅಮಾನತು

ಲೋಕಸಭೆಯಲ್ಲಿ ಗಂಭೀರ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ಲೋಕಸಭೆಯ ಸಚಿವಾಲಯವು ಏಳು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಯುಎಪಿಎಯಡಿ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆರು ಮಂದಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆಯ ಒಳಗೆ ನುಗ್ಗಿದ್ದ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಹಾಗೂ ಸಂಸತ್ತಿನ ಆವರಣದ ಹೊರಗೆ ಪ್ರತಿಭಟಿಸಿದ್ದ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಸಹಿತ ತಪ್ಪಿಸಿಕೊಂಡಿದ್ದ ಇಬ್ಬರು ಸೇರಿ ಒಟ್ಟು ಆರು ಮಂದಿಯ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...