ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

Date:

“2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು ಹಿರಿಯ ನಾಯಕರನ್ನು ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ” ಎಂದು ಬದ್ಲಾಪುರ ಬಿಜೆಪಿ ಶಾಸಕ ರಮೇಶ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಎರಡು ಬಾರಿ ಬಿಜೆಪಿ ಶಾಸಕರಾಗಿರುವ ರಮೇಶ್ ಚಂದ್ರ ಮಿಶ್ರಾ ಅವರು ಈ ಬಗ್ಗೆ ವಿಡಿಯೋ ಒಂದರಲ್ಲಿ ಮಾತನಾಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಕಾಮೆಂಟ್ ಮಾಡಿರುವ ನೆಟ್ಟಿಗರು “ಹೌದು ಬಿಜೆಪಿ ಶಾಸಕ ಹೇಳುತ್ತಿರುವುದು ಸರಿಯೇ ಇದೆ. ಬಿಜೆಪಿ ನಾಯಕರು ಸ್ಥಳೀಯವಾಗಿ ಯಾವುದೇ ಕಾರ್ಯ ಮಾಡುತ್ತಿಲ್ಲ” ಎಂದಿದ್ದಾರೆ.

“ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸದ್ಯದ ಸ್ಥಿತಿ ಅತಂತ್ರವಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಿಂದ ಕೆಳಗಿಳಿಯುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ವಿಡಿಯೋದಲ್ಲಿ ಬಿಜೆಪಿ ಶಾಸಕ ಹೇಳಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  Viral video: ಅಮಿತ್ ಶಾ ವಿರುದ್ಧ ಸಿಡಿಮಿಡಿಗೊಂಡ ಯುಪಿ ಬಿಜೆಪಿ ಕಾರ್ಯಕರ್ತ: ವಿಡಿಯೋ ವೈರಲ್!

ಇನ್ನು ಇದೇ ವಿಡಿಯೋದಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ರಾಜಕೀಯ ಭಾಷಣಗಳ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಮಿಶ್ರಾ, “ಹಿಂದುಳಿದ ವರ್ಗಗಳು ಅಥವಾ ಒಬಿಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರ ರಾಜಕೀಯ ಭಾಷಣದಲ್ಲಿ ಪ್ರಾಬಲ್ಯ ಸಾಧಿಸಿದ ರೀತಿ ಮತ್ತು ಸಮಾಜವಾದಿ ಪಕ್ಷವು ಸೃಷ್ಟಿಸಿದ ದಾರಿತಪ್ಪಿಸುವ ವಾತಾವರಣವನ್ನು ಪರಿಗಣಿಸಿದರೆ ನಮ್ಮ ಪಕ್ಷದ ಪರಿಸ್ಥಿತಿಯು ರಾಜ್ಯದಲ್ಲಿ ಅಷ್ಟು ಪ್ರಬಲವಾಗಿಲ್ಲ ಎಂದು ತೋರುತ್ತದೆ” ಎಂದು ಅಭಿಪ್ರಾಯಿಸಿದರು.

“ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಸಲುವಾಗಿ ಅವರ / ಅವಳ ಆತ್ಮ ಮತ್ತು ಹೃದಯಪೂರ್ವಕವಾಗಿ ಶ್ರಮಿಸಬೇಕಾಗುತ್ತದೆ. ಆಗ ಮಾತ್ರ ನಾವು ಮತ್ತೆ ಸರ್ಕಾರವನ್ನು ರಚಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ, ಪ್ರಸ್ತುತ ಪರಿಸ್ಥಿತಿಯು ಕರಾಳವಾಗಿದೆ, ನಮ್ಮ ಸರ್ಕಾರದ ಸ್ಥಿತಿ ಕೆಟ್ಟದಾಗಿದೆ” ಎಂದು ಹೇಳಿದರು.

ಮಿಶ್ರಾ ಹೇಳಿಕೆಯು ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚುತ್ತಿರುವ ಆತಂಕವನ್ನು ಪ್ರತಿಧ್ವನಿಸಿದೆ. ವಿಶೇಷವಾಗಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ಇರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋಲು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಳಿಯುತ್ತಿರುವುದರ ಸೂಚನೆಯಂತಾಗಿದೆ. ಇನ್ನು ಈ ವಿಡಿಯೋ ವೈರಲ್ ಆದ ಬಳಿಕ ಯಾರ ಕರೆ, ಇಮೇಲ್‌ಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...