ರಾಜ್ಯದಲ್ಲಿ ಈಗ ‘ಪೇ ಡಬಲ್ ಸಿಎಂ’ ವ್ಯವಸ್ಥೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ

Date:

ರಾಜ್ಯದಲ್ಲಿ ಈಗ ‘ಪೇ ಡಬಲ್’ ಸಿಎಂ ಆಗಿದೆ‌. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ನಮ್ಮ ವಿರುದ್ಧ ಯಾವುದೇ ದಾಖಲೆ ಇಲ್ಲದೇ ವಿನಾಕಾರಣ ಆರೋಪ ಮಾಡಿದ್ದರು. ಈಗ ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವುದನ್ನು ಅವರೇ ತನಿಖೆ ನಡೆಸಲಿ” ಎಂದು ಆಗ್ರಹಿಸಿದರು.

“ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂದರೆ ಭ್ರಷ್ಟಾಚಾರ ಯಾವ ಹಂತಕ್ಕೆ ತಲುಪಿದೆ ಎಂದು ಊಹಿಸಿ” ಎಂದರು.

ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಅಭಿವೃದ್ದಿಯೇ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್ ನವರ ಆಲೋಚನೆಗಳಿಗೂ ಶಿಗ್ಗಾಂವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸ ಇದೆ. ಸರ್ಕಾರ ಅವರದೇ ಇದೆ. ಶಿಗ್ಗಾಂವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್, ಸವಣೂರಿನಲ್ಲಿ ಆಯುರ್ವೆದಿಕ್ ಕಾಲೇಜ್, ಐಟಿಐ ಕಾಲೆಜ್, ಪ್ರವಾಹ ಸಂದರ್ಭದಲ್ಲಿ 12,000 ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಶಿಗ್ಗಾಂವಿಯಲ್ಲಿವೆ. ಸಿಎಂ ಕಾರಲ್ಲಿ ಹೋಗುವಾಗ ನಿದ್ದೆ ಮಾಡುತ್ತಿದ್ದರಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್‌ ಕುಮಾರಸ್ವಾಮಿ

“ಇಡೀ ಸರ್ಕಾರ ನನ್ನ ಮೇಲೆ ದಂಡೆತ್ತಿ ಬಂದಿದೆ‌ ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಾನು ಹೇಳುತ್ತೇನೆ. ವರುಣಾ, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಜನ ಏನು ಹೇಳುತ್ತಾರೆ, ಇಲ್ಲಿ ಬಂದಿರುವ ಕಾಂಗ್ರೆಸ್ ಮಂತ್ರಿಗಳು, ಶಾಸಕರ ಕ್ಷೇತ್ರಗಳು ಹೇಗಿವೆ ಎಂದು ಅವರು ಹೇಳಲಿ. ಈ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸಕ್ಕೆ ಹಣ ಬಿಡುಗಡೆ ಮಾಡಿಲ್ಲ. ನಾನು ಮುಖ್ಯಮಂತ್ರಿ ಇದ್ದಾಗ ಅಲ್ಪ ಸಂಖ್ಯಾತರ ದರ್ಗಾ, ಮಸೀದಿ ಅಭಿವೃದ್ಧಿಗೆ 10 ಕೋಟಿ ರೂ. ಕೊಟ್ಟಿದ್ದೆ. ಇವರು ಬಂದು ಅದನ್ನು ವಾಪಸ್ ಪಡೆದುಕೊಂಡಿದ್ದಾರೆ. ಇವರೇನು ಅಲ್ಪ ಸಂಖ್ಯಾತರ ಬಗ್ಗೆ ಮಾತನಾಡುವುದು” ಎಂದು ವಾಗ್ದಾಳಿ ನಡೆಸಿದರು.

ಸ್ವಾಮೀಜಿಗೆ ಅವಮಾನ

“ಕಾಗಿನೆಲೆ ಗುರು ಪೀಠದ ಸ್ವಾಮೀಜಿ ಬಗ್ಗೆ ಒಬ್ಬ ಮುಖ್ಯಮಂತ್ರಿಯಾಗಿ ಗುರುಗಳಿಗೆ ದಾಷ್ಟ್ಯದ ಮಾತು ಹೇಳುವುದು ಅವರಿಗೆ ಅವಮಾನ ಮಾಡಿದಂತೆ‌. ಅವರು ನಮ್ಮ ಗುರುಗಳು, ಅವರ ನಮ್ಮ ನಡುವೆ ಗುರು ಭಕ್ತರ ಸಂಬಂಧ ಇದೆ. ಚುನಾವಣೆ ಸೋಲಿನ ಭಯದಲ್ಲಿ ಸಿಎಂ ಸ್ವಾಮಿಜಿಯನ್ನು ಎಳೆ ತರುವ ಪ್ರಯತ್ನ ಮಾಡಿದ್ದಾರೆ” ಎಂದರು.

ಮುಡಾ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ವಿರುದ್ದ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಮುಡಾ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ಇದೆ. ಒಬ್ಬ ಹಾಲಿ ಸಿಎಂ ತನಿಖೆಗೆ ಹಾಜರಾಗುತ್ತಿರುವುದು ಇದೇ ಮೊದಲು” ಎಂದರು.

“ಬೆಳಗಾವಿಯಲ್ಲಿ ಸರ್ಕಾರಿ ನೌಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ವಿರುದ್ದ ಡೆತ್ ನೋಟ್ ಬರೆದಿಟ್ಟು ಸಾವಿಗೀಡಾಗಿರುವ ಪ್ರಕರಣದ ಕುರಿತು ತನಿಖೆಯಾಗಲಿ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ರೋಷಿಹೊಗಿದ್ದಾರೆ. ಶಿಗ್ಗಾವಿಯಲ್ಲಿಯೂ ಸರ್ಕಾರಿ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...