ಪೆನ್‌ಡ್ರೈವ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ; ದೇವರಾಜೇಗೌಡ, ಕಾರ್ತಿಕ್‌ಗೆ ನೋಟಿಸ್‌ ಜಾರಿ

Date:

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಿದ್ದು, ಬಿಜೆಪಿ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌ ಜಾರಿ ಮಾಡಿದೆ.

ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಏ.23 ರಂದು ಜೆಡಿಎಸ್‌ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಹಾಸನದ ಸೈಬರ್‌ ಠಾಣೆಗೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ಗೌಡ ಹಾಗೂ ಚೇತನ್‌ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಂತರ ಆರೋಪಿಗಳು ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಈಗ ಕಾರ್ತಿಕ್‌ ಮತ್ತು ದೇವರಾಜೇಗೌಡನಿಗೆ ಎಸ್‌ಐಟಿ ನೋಟಿಸ್ ನೀಡಿದ್ದು, 24 ಗಂಟೆಯೊಳಗೆ ವಿಚಾರಣೆ ಹಾಜರಾಗುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಟಿಯಿಂದ ಜಿ. ದೇವರಾಜೇಗೌಡ ಹಾಗೂ ಕಾರ್ತಿಕ್‌ ವಿಚಾರಣೆಯ ನಂತರ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ನಿಜ ಮಾಹಿತಿ ಬಹಿರಂಗವಾಗಲಿದೆ.

ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆಗೆ ಪ್ರಜ್ವಲ್‌ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಂತರ ಸ್ಥಳ ಮಹಜರು ಕೂಡ ಮಾಡಲಾಗಿದೆ. ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಪಾಟ್ ಮಹಜರ್ ಮಾಡಲಾಗಿದೆ. ಸಂತ್ರಸ್ತೆ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...