ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

Date:

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.

ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ. “ತಂದೆ ಮತ್ತು ಮಗ ಇಬ್ಬರೂ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ” ಎಂದು ಆರೋಪಿಸಿರುವ ಸಂತ್ರಸ್ತೆ ಆಯೋಗದ ಮೊರೆ ಹೋಗಿದ್ದಾರೆ.

ಈ ದೂರಿನ ಸಂಬಂಧ ’ಈದಿನ.ಕಾಂ’ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರಿಗೆ ಕರೆ ಮಾಡಿದಾಗ, “ಪ್ರಭಾವಿ ರಾಜಕಾರಣಿಗಳಿಬ್ಬರ ಮೇಲೂ ದೂರು ಬಂದಿರುವುದು ಖಚಿತ. ಇದನ್ನು ಡಿಜಿಯವರ ಗಮನಕ್ಕೆ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ನಾಗಲಕ್ಷ್ಮಿ ಅವರು, “ಪೆನ್ ಡ್ರೈವ್ ಆಯೋಗಕ್ಕೂ ತಲುಪಿದೆ. ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಸಂತ್ರಸ್ತ ಹೆಣ್ಣುಮಕ್ಕಳಿಗೆ ಎಲ್ಲ ರೀತಿಯ ರಕ್ಷಣೆ ನೀಡಲಾಗುವುದು” ಎಂದು ತಿಳಿಸಿದ್ದರು. ಆಯೋಗದ ಆಗ್ರಹಕ್ಕೆ ಸ್ಪಂದಿಸಿರುವ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ನಿರ್ಧರಿಸಿದೆ.

ಹಾಸನದ ಹಲವೆಡೆ ಪೆನ್‌ಡ್ರೈವ್‌ಗಳು ಪತ್ತೆಯಾಗಿ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಹೆಣ್ಣುಬಾಕ ಲೈಂಗಿಕ ಹಗರಣ ಬಯಲಾಗಿತ್ತು. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಪ್ರಭಾವಿ ಯುವ ರಾಜಕಾರಣಿ, ಅನೇಕ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಮತ್ತು ತಾನೇ ಅದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿರುವುದು ಬೆಳಕಿಗೆ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...