ಪ್ರಜ್ವಲ್‌ ಪೆನ್‌ಡ್ರೈವ್ ಪ್ರಕರಣ |‌ ಸಂತ್ರಸ್ತ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ : ಪ್ರಿಯಾಂಕ್‌ ಖರ್ಗೆ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ನಡೆದ ತಕ್ಷಣ ಹೆಚ್ಚಿನ ಆಸಕ್ತಿ ತೋರಿಸಿ ಚುನಾವಣೆ ನೀತಿ‌ ಸಂಹಿತೆಯನ್ನು ಲೆಕ್ಕಿಸದೆ ಪ್ರತಿಭಟನೆ ಮಾಡಿದ್ದ ಬಿಜೆಪಿ ನಾಯಕರು ನೊಂದ ಮಹಿಳೆಯರ ಪರ‌ ನ್ಯಾಯಕ್ಕಾಗಿ ಜೆಡಿಎಸ್ ವಿರುದ್ದ ಯಾವಾಗ ಪ್ರತಿಭಟನೆ ಮಾಡುತ್ತಾರೆ” ಎಂದು ಪ್ರಶ್ನಿಸಿದರು.

“ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ‌ ತಂಡ ರಚಿಸಿದ್ದು, ಕಾನೂನು ಪ್ರಕಾರ ತನಿಖೆ ನಡೆಯಲಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕೇಂದ್ರ ಸರ್ಕಾರವೇ ಪ್ರಜ್ವಲ್ ಅವರನ್ನು‌ ವಿದೇಶಕ್ಕೆ ಕಳಿಸಿದೆ ಎನ್ನುವ ಮಾತುಗಳಿವೆ. ಈ ಬಗ್ಗೆ ಮೋದಿ‌ ಸೇರಿದಂತೆ ಬಿಜೆಪಿ ನಾಯಕರು ಉತ್ತರಿಸಲಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ಪ್ರಧಾನಿ ಸ್ಪರ್ಧಿಸಿದ್ದ ಹಾಸನದಂತಹ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೇಟ್ ನೀಡಬಾರದು. ಅವರ ನಡುವಳಿಕೆ ಸರಿ ಇಲ. ಹಲವಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಲ್ಲಿನ ಮಾಜಿ ಶಾಸಕರೊಬ್ಬರು ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಅವರಿಗೆ ಪತ್ರ ಬರೆದಿದ್ದರು. ಟಿವಿ ಮಾಧ್ಯಮದ ಮುಂದೆ ಮಾತನಾಡುವಾಗಲೂ ಕೂಡಾ ಕುಮಾರಸ್ವಾಮಿ‌ ಪ್ರಜ್ವಲ್ ಗೆ ಟಿಕೇಟ್ ನೀಡುವ ವಿಚಾರದಲ್ಲಿ‌ ವಿರೋಧವಿರುವ ಬಗ್ಗೆ ಒಪ್ಪಿಕೊಂಡಿದ್ದರು. ಆದರೂ ಕೂಡಾ ದೇವೆಗೌಡ ಹಾಗೂ ಇಡೀ ಕುಟುಂಬ ಹೋಗಿ ಟಿಕೇಟ್ ಪಡೆದುಕೊಂಡು ಬಂದಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಾಟ್ಸ್ಯಾಪ್ ಯೂನಿವರ್ಸಿಟಿಯ ಭಕ್ತರೂ ಮತ್ತು ಮಹಾಪ್ರಭು ಮೋದಿಯೂ

“ಪ್ರಜ್ವಲ್ ಅವರ ಲೈಂಗಿಕ‌‌ ಕಿರುಕುಳದಿಂದ ಸಾವಿರಾರು ಮಹಿಳೆಯರು ದೌರ್ಜನಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಇದೆ. ಅವರೆಲ್ಲರೂ ಹಿಂದೂ ಮಹಿಳೆಯರೇ ಆಗಿದ್ದಾರೆ. ಅವರಿಗೆ ನ್ಯಾಯ ಕೊಡಿಸಬೇಕೆಂದು ಬಿಜೆಪಿಯವರಿಗೆ ಅನಿಸುತ್ತಿಲ್ಲವೇ? ಬಿಜೆಪಿ ಅವರಿಂದ ಹುಬ್ಬಳಿಗೊಂದು ನ್ಯಾಯ, ಹಾಸನಕ್ಕೊಂದು ನ್ಯಾಯನಾ? ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...