ಶರಾವತಿ ಸಂತ್ರಸ್ತರ ಬಾಕಿ ಪ್ರಕರಣ | ತ್ವರಿತ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

Date:

ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಹಕ್ಕು ನೀಡುವಂತೆ ಆರು ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಕಲ್ಪಿಸುವ, ಅರಣ್ಯ ಹಕ್ಕು ಕಾಯಿದೆಯಡಿ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಹಾಗೂ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಅಂಗಾಂಗದ ಫಲಕಗಳು, ಆಭರಣಗಳೇ ಮೊದಲಾದ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದುಬಾರಿ ಅವಕಾಶ ನೀಡುವ ನಿಟ್ಟಿನಲ್ಲಿ ಕಾನೂನಾತ್ಮಕ ವಿಷಯಗಳ ಕುರಿತಂತೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.

“1958ರಿಂದ 1969ರ ನಡುವೆ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ಮತ್ತು ಜಲ ವಿದ್ಯುತ್ ಯೋಜನೆಯ ನಿರ್ಮಾಣದ ವೇಳೆ ರೈತರು ಗಣನೀಯ ಪ್ರಮಾಣದಲ್ಲಿ ತಮ್ಮ ಭೂಮಿ ಕಳೆದುಕೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಸುಮಾರು 9136 ಎಕರೆ 27 ಗುಂಟೆ ಅರಣ್ಯ ಭೂಮಿಯನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನು ಅಂದಿನ ಮೈಸೂರು ಅರಣ್ಯ ನಿಯಂತ್ರಣ -1900 ಸೆಕ್ಷನ್ 30ರಡಿ ಡಿ ರಿಸರ್ವ್ ಮಾಡಲಾಗಿತ್ತು. ಆದರೆ ಅದು ಅಧಿಸೂಚನೆ ಆಗಿರಲಿಲ್ಲ, ಬಿಡುಗಡೆಯಾದ ಈ ಜಾಗದಲ್ಲಿ ಸಂತ್ರಸ್ತ ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ಸರ್ಕಾರದ ಸೌಲಭ್ಯ ಲಭಿಸುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ ಸಮಸ್ಯೆ ಉಂಟಾಗಿದೆ. ಇದನ್ನು ಮನಗಂಡು ಸರ್ಕಾರ 2015-2017ರ ನಡುವೆ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಿತು. ಆದರೆ ಈ ಆದೇಶಕ್ಕೆ ಮುನ್ನ ಭಾರತ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ನ್ಯಾಯಾಲಯದ ಆದೇಶದನ್ವಯ ಸರ್ಕಾರ ತನ್ನ ಆದೇಶ ಹಿಂಪಡೆಯಿತು. ಈಗ 23.03.203ರಂದು 9129 ಎಕರೆ ಭೂಮಿ ಡಿ ರಿಸರ್ವ್ ಮಾಡವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಈ ಎಲ್ಲದರ ಹಿನ್ನೆಲೆಯಲ್ಲಿ ಇಂದು ಕಾನೂನು ಇಲಾಖೆ ಉನ್ನತಾಧಿಕಾರಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಲಾಗಿದ್ದು, ಎಲ್ಲ ಸಂತ್ರಸ್ತರಿಗೂ ನ್ಯಾಯ ದೊರಕಬಹುದು ಎಂಬ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಹುಲಿ ಉಗುರು; ಸಂಪುಟಕ್ಕೆ ಪ್ರಸ್ತಾವನೆ

“ವನ್ಯಜೀವಿಗಳ ಅಂಗಾಂಗದ ವಸ್ತುಗಳನ್ನು ಇಟ್ಟುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ, ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡಬಹುದು, ಕೇರಳ ಸರ್ಕಾರ ಕೈಗೊಂಡ ನಿರ್ಧಾರ ಮತ್ತು ನಮ್ಮ ಸರ್ಕಾರದ ಉದ್ದೇಶಿತ ನಿರ್ಧಾರ ವಿಭಿನ್ನವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಕಡತವನ್ನು ಪುನರ್ ಮಂಡಿಸಲು ಸೂಚನೆ ನೀಡಲಾಗಿದೆ. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ಕಾನೂನಿನ ಅರಿವಿಲ್ಲದೆ ತಮ್ಮ ಬಳಿ ವನ್ಯಜೀವಿಗಳ ಅಂಗಾಂಗದ ವಸ್ತುಗಳನ್ನು ನೋಂದಣಿ ಮಾಡದೆ ಇಟ್ಟುಕೊಂಡಿರುವ ಮುಗ್ದ ಜನತೆಗೆ ಕಿರುಕುಳ ಆಗದ ರೀತಿಯಲ್ಲಿ ಒಂದು ಬಾರಿ ಕೊನೆಯ ಅವಕಾಶ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದಕ್ಕೂ ಮುನ್ನ ವಿಕಾಸಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...