ಜಗದೀಶ್‌ ಶೆಟ್ಟರ್‌ಗೆ ಹುಬ್ಬಳ್ಳಿ ಜನ ಪಾಠ ಕಲಿಸುತ್ತಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

  • ಬಿ ಎಲ್‌ ಸಂತೋಷ್‌ ಪರ ವಕಾಲತ್ತು ವಹಿಸಿದ ಶೋಭಾ‌ ಕಂದ್ಲಾಜೆ
  • ಕಾಂಗ್ರೆಸ್‌ ಸೇರಿದ ಜಗದೀಶ್‌ ಶೆಟ್ಟರ್‌ ಖಂಡಿಸಿದ ಕೇಂದ್ರ ಸಚಿವೆ

ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಈಗ ಹೊರ ಹೋಗಿರುವ ಜಗದೀಶ್ ಶೆಟ್ಟರ್‌ಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ಕೇಂದ್ರ ಸಚಿವೆ, ಕೇವಲ ಶಾಸಕ ಸ್ಥಾನಕ್ಕಾಗಿ ಕಾಂಗ್ರೆಸ್ ಸೇರಿದ್ದು ಎಷ್ಟು ಸರಿ..? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಿರೋಧಿಸುತ್ತಿದ್ದವರೇ ಇಂದು ಆ ಪಕ್ಷಕ್ಕೆ ಹೋಗಿದ್ದಾರೆ. ಧ್ವಜ ಬದಲಾದಂತೆ ಆಲೋಚನೆ ಬದಲಾಗುತ್ತಾ..? ಶೆಟ್ಟರ್ ಕಾಂಗ್ರೆಸ್ ಸೇರಿರೋದು ಬೇಸರ ತರಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಶೆಟ್ಟರ್‌ಗೆ ಇಲ್ಲಿನ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಶೋಭಾ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? :ಇಡೀ ಬಿಜೆಪಿ ಬಿ ಎಲ್ ಸಂತೋಷ್ ಕಪಿಮುಷ್ಠಿಯಲ್ಲಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿ.ಎಲ್. ಸಂತೋಷ್ ಸಮರ್ಥಿಸಿಕೊಂಡ ಸಚಿವೆ ಶೋಭಾ, “ಸಂತೋಷ್‌ ಅವರು ಎಂದಿಗೂ ಜಗದೀಶ್ ಶೆಟ್ಟರ್ ವಿರೋಧಿಯಲ್ಲ. ಅವರು ಶಾಸಕರಾಗಿಲ್ಲ, ಸಂಸದರಾಗಿಲ್ಲ. ಎಲ್ಲಿಯೂ ಸ್ಪರ್ಧೆ ಮಾಡುತ್ತಿಲ್ಲ. ಇಷ್ಟು ವರ್ಷ ಸಂತೋಷ್ ಕೆಲಸ ಮಾಡಿದ್ದು ಪಕ್ಷ ಸಂಘಟನೆಗಾಗಿ. ಸಂತೋಷ್ ಅವರು ಒಂದು ವಿಚಾರದಿಂದ ಬಂದಿದ್ದಾರೆ. ಆ ವಿಚಾರದಿಂದ ಬಂದವರನ್ನು ಗೆಲ್ಲಿಸಬೇಕು ಅನ್ನೋದು ಅವರ ಉದ್ದೇಶ ಅಷ್ಟೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...