ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ರಾಜ್ಯದ ಜನತೆಗೆ ಮಾಡುವ ದ್ರೋಹ: ಬೊಮ್ಮಾಯಿ ಕಿಡಿ

Date:

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಎಕ್ಸ್ ತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದರ ನೇರ ಹೊಣೆ ಕಾಂಗ್ರೆಸ್‌ ಹೊರಬೇಕು” ಎಂದಿದ್ದಾರೆ.

“ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟೋಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...