ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಸಚಿವ ಪರಮೇಶ್ವರ್‌

Date:

ಸಂಪನ್ಮೂಲ ಕ್ರೋಡೀಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು? ಎಂದು ಗೃಹ ಸಚಿವ ಪರಮೇಶ್ವರ್ ‌ತಮ್ಮ ಸರ್ಕಾರ ಬೆಲೆ ಏರಿಕೆ ನಡೆಯನ್ನು ಸಮರ್ಥಿಸಿಕೊಂಡರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ‌” ಎಂದರು.

“ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇವತ್ತು ಒಂದು ಮಾತನ್ನು ಹೇಳುತ್ತೇನೆ. ಆ ಮಾತು ಶಾಶ್ವತವಾಗಿ ಉಳಿದು ಹೋಗುತ್ತದೆಯೇ? ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ: ಯಾರಿಗೂ ರಕ್ಷಣೆ ಇಲ್ಲ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯ ಕುರಿತು ಪ್ರತಿಕ್ರಿಯಿಸಿ,”ತನಿಖೆ ಆಗುವವರೆಗೂ ಬಹಿರಂಗವಾಗಿ ಜನರ ಮುಂದೆ ಹೇಳಿಕೆ ನೀಡಲು ಆಗುವುದಿಲ್ಲ. ತನಿಖೆ ಆದ ನಂತರ ವರದಿ ಬರುತ್ತದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಹೇಳಿದ್ದೀನಿ, ಮುಖ್ಯಮಂತ್ರಿಯವರು ಹೇಳಿದ್ದಾರೆ. ಯಾರನ್ನೇ ರಕ್ಷಣೆ ಮಾಡುವುದಾಗಲಿ, ಯಾರ ಬಗ್ಗೆಯೂ ಮೃದು ಧೋರಣೆ ತೋರುವುದಾಗಲಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಮರುನೇಮಕ ಕುರಿತು ಮಾತನಾಡಿ, “ಆಡಳಿತಾತ್ಮಕವಾಗಿ ಏನು ಅಗತ್ಯ ಇದೆಯೋ ಅದನ್ನು ಮಾಡುತ್ತೇವೆ. ಕೆಲ ಸಂದರ್ಭಗಳಲ್ಲಿ ತನಿಖಾಧಿಕಾರಿಗಳನ್ನು ಬದಲಾಯಿಸಿದ್ದೇವೆ. ಸಮರ್ಥವಾದ ಅಧಿಕಾರಿ ಯಾರು ಇದ್ದಾರೆ ಎಂಬುದನ್ನು ಪರಿಗಣಿಸಿ, ಇಲಾಖೆಯ ಹಿರಿಯ ಅಧಿಕಾರಿಗಳೇ ಮರುನೇಮಕ ಮಾಡಿಕೊಳ್ಳುತ್ತಾರೆ. ನಾವ್ಯಾರೂ ಸೂಚನೆ ಕೊಡುವುದಿಲ್ಲ” ಎಂದು ತಿಳಿಸಿದರು.

“ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಮೀಸಲಾತಿ ಸಂಪೂರ್ಣ ಮಾಡಬೇಕು. ಮೀಸಲಾತಿ ಸರಿಯಿಲ್ಲ ಎಂದು ಯಾರಾದರು ಕೋರ್ಟ್‌ಗೆ ಹೋಗಬಹುದು. ಇದಾಗದಂತೆ ನೋಡಿಕೊಳ್ಳಬೇಕಿದೆ” ಎಂದರು.

ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವನೆ ಘಟನೆಯ ತಪ್ಪಿತಸ್ಥ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಶೋಕ್ ಆಗ್ರಹಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾರು ಅದರಲ್ಲಿ ನೇರವಾಗಿ ಭಾಗಿಯಾಗಿರುತ್ತಾರೆ ಅವರನ್ನು ಅಮಾನತು ಮಾಡಬೇಕಾಗುತ್ತದೆ. ಈಗಾಗಲೇ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ವಾಟರ್‌ಮೆನ್‌ನನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಹಿರಿಯ ಅಧಿಕಾರಿಗಳ‌ ಲೋಪ ಕಂಡು ಬಂದರೆ ಅವರನ್ನು ಅಮಾನತು ಮಾಡುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...