ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ | ‘ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು’ ಎಂದ ವಿಪಕ್ಷ ನಾಯಕ ಅಶೋಕ್!

Date:

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, “ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ, ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ” ಎಂದು ದೂರಿದ್ದಾರೆ.

“ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ” ಎಂದು ವಿಪಕ್ಷ ನಾಯಕ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಕಿಡಿ

ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಕರ್ನಾಟಕ ಬಿಜೆಪಿ ಘಟಕ, “ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್” ಎಂದು ಹೇಳಿದೆ.

“ರಾಜ್ಯದ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ ಬೆಲೆ ಪ್ರತಿ ಲೀ. ಗೆ ₹3 ಹಾಗೂ ಡಿಸೇಲ್‌ ಬೆಲೆ ಪ್ರತಿ ಲೀ.ಗೆ ₹3.50 ಯನ್ನು ಏಕಾಏಕಿ ಹೆಚ್ಚಿಸಿದೆ. ಸಿಎಂ ಸಿದ್ದರಾಮಯ್ಯ ಅವರೇ, ಪೆಟ್ರೋಲಿಯಂ ಕಚ್ಚಾತೈಲದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಮೇಲಾಗಿ ನೀವೇ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ, ಅಂದ ಮೇಲೆ ದಿಢೀರ್‌ ಅಂತ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎದುರಿಸಲು ಸಿದ್ದವಾಗಿ” ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...