ಅಮೆರಿಕ, ಇಸ್ರೇಲ್ ‘ದುಷ್ಟ ರಾಷ್ಟ್ರಗಳು’, ಭಾರತೀಯರನ್ನು ವಾಪಸ್ ಕರೆತರಲು ಸಿದ್ಧವಾಗಿರಿ: ಕೇಂದ್ರಕ್ಕೆ ಪಿಣರಾಯಿ ಒತ್ತಾಯ

Date:

ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸಿದ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಟೀಕಿಸಿದ್ದಾರೆ. ಈ ಎರಡೂ ರಾಷ್ಟ್ರಗಳು ‘ದುಷ್ಟ ರಾಷ್ಟ್ರಗಳು’ ಎಂದು ಪಿಣರಾಯಿ ಹೇಳಿದ್ದಾರೆ. ಹಾಗೆಯೇ ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇಸ್ರೇಲ್, ಅಮೆರಿಕ ತನ್ನ ಮೇಲೆ ದಾಳಿ ನಡೆಸಿದ ಬಳಿಕ ಇರಾನ್ ಗಲ್ಫ್ ರಾಷ್ಟ್ರಗಳಲ್ಲಿ ಇರುವ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಗಲ್ಫ್ ರಾಷ್ಟ್ರಗಲ್ಲಿಯೂ ಉದ್ವಿಗ್ನತೆ ಉಂಟಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಾಗಿ ಮಲಯಾಳಿಗಳು ವಲಸೆ ಹೋಗಿ ವಾಸಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳ ಸಿಎಂ ಪತ್ರ ಬರೆದಿದ್ದು, “ಅಗತ್ಯವಿದ್ದರೆ ಅನಿವಾಸಿ ಭಾರತೀಯರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ಕೇಂದ್ರವು ಸಿದ್ಧರಾಗಿರಬೇಕು” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ: ಜಮ್ಮು ಕಾಶ್ಮೀರ, ಲಡಾಖ್‌ನಲ್ಲಿ ಪ್ರತಿಭಟನೆ; ಶೋಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ಮೂರು ಮಿಲಿಯನ್ ಮಲಯಾಳಿಗಳು ಗಲ್ಫ್ ರಾಷ್ಟ್ರಗಳಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಕೇರಳ ಸರ್ಕಾರಿ ಸಂಸ್ಥೆ ನೋರ್ಕಾ ರೂಟ್ಸ್ ಈಗಾಗಲೇ ಅನಿವಾಸಿ ಭಾರತೀಯರಿಗಾಗಿ ನಿಯಂತ್ರಣ ಕೊಠಡಿಯನ್ನು ತೆರೆದಿದೆ.

ವಯನಾಡಿನಲ್ಲಿ ಭೂಕುಸಿತ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸುವ ಸಮಾರಂಭದಲ್ಲಿ ಮಾತನಾಡಿದ ಪಿಣರಾಯಿ, “ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಅವರ ಕುಟುಂಬ ಸದಸ್ಯರನ್ನು ಕೊಂದು ಅಮೆರಿಕ ಮತ್ತು ಇಸ್ರೇಲ್ ಆ ರಾಷ್ಟ್ರದ ವಿರುದ್ಧ ಮಾಡುತ್ತಿರುವುದು ಗೂಂಡಾಗಿರಿ ಮತ್ತು ಹುಚ್ಚುತನ. ತಮ್ಮ ಹಿತಾಸಕ್ತಿಗಳಿಗೆ ಮಣಿಯುವ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಸಾಮ್ರಾಜ್ಯಶಾಹಿ ಈ ಗೂಂಡಾಗಿರಿಯನ್ನು ಮುನ್ನಡೆಸುತ್ತಿದೆ. ಇದರ ವಿರುದ್ಧ ನಾವು ನಮ್ಮ ಬಲವಾದ ಅಸಮಾಧಾನವನ್ನು ವ್ಯಕ್ತಪಡಿಸಬೇಕು” ಎಂದೂ ಹೇಳಿದರು.

ಇದನ್ನು ಓದಿದ್ದೀರಾ? ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಸೇನಾ ಮುಖ್ಯಸ್ಥ, ರಕ್ಷಣಾ ಸಚಿವ ಹತ

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥ ಮತ್ತು ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಅವರೊಂದಿಗೆ ಸಭೆ ನಡೆಸುತ್ತಿದ್ದ ಜನರಲ್ ಅಬ್ದುಲ್ ರಹೀಮ್ ಮೌಸವಿ ಮತ್ತು ರಕ್ಷಣಾ ಸಚಿವ ಜನರಲ್ ಅಜೀಜ್ ನಾಸಿರ್ಜಾದೆ ಹತರಾಗಿದ್ದಾರೆ ಎಂದೂ ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...