ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

Date:

ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದು ಹೇಳಿದ್ದಾರೆ. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಕಾಂಗ್ರೆಸ್ ಸರ್ಕಾರ ಕಾರ್ಯಗತಗೊಳಿಸುತ್ತಿದೆ ಎಂದು ದೂರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಿಣರಾಯಿ ವಿಜಯನ್, “ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಪಾಲು ಮಾಡಲಾಗಿದೆ. ಈ ಘಟನೆಯು ‘ಬುಲ್ಡೋಜರ್ ರಾಜ್ಯ’ದ ಕ್ರೂರ ಸಾಮಾನ್ಯೀಕರಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸ್ಲಂ ನಿವಾಸಿಗಳ ಮೇಲೆ ಅಧಿಕಾರಿಗಳ ದರ್ಪ; 300 ಕುಟುಂಬಗಳು ಬೀದಿಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿರುವುದು ದುಃಖಕರ ವಿಚಾರ” ಎಂದೂ ಪಿಣರಾಯಿ ಟೀಕಿಸಿದ್ದಾರೆ.

“ಭಯದ ವಾತಾವರಣ ಮತ್ತು ಕ್ರೂರವಾದ ಬಲ ಪ್ರಯೋಗದ ಮೂಲಕವೇ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲು ಬಲಿಪಶುಗಳಾಗುತ್ತವೆ. ಈ ಕಪಟತನವನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕು” ಎಂದು ಪಿಣರಾಯಿ ಕರೆ ನೀಡಿದ್ದಾರೆ.

ಏನಿದು ಕೋಗಿಲು ಬಡಾವಣೆ ಪ್ರಕರಣ?

ಬೆಂಗಳೂರು ನಗರದ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿದ್ದು 2,500ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೋಗಿಲು ಗ್ರಾಮದ ಸರ್ವೆ ನಂ.99ರಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳ ಜಾಗದಲ್ಲಿ 25-30 ವರ್ಷಗಳಿಂದಲೂ ನಿರ್ಗತಿಕರು, ಬಡವರು ಮನೆ ಕಟ್ಟಿಕೊಂಡು ನೆಲೆಸಿದ್ದರು. ಇಲ್ಲಿ ಬಹುತೇಕರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು.

ಇದನ್ನು ಓದಿದ್ದೀರಾ? 180 ಮನೆಗಳನ್ನು ನೆಲಸಮಗೊಳಿಸಿದ GBA : ನಿರಾಶ್ರಿತರಿಗೆ ತಕ್ಷಣದ ಪರಿಹಾರ ಸಿಗುವುದೇ?

14 ಎಕರೆ 36 ಗುಂಟೆ ವಿಸ್ತೀರ್ಣದ ಪಾಲಿಕೆ ಜಾಗದಲ್ಲಿ 180 ಮನೆಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆ ಎಂಬುದು ಆಡಳಿತದ ಆರೋಪ. ಈ ಕಾರಣಕ್ಕೆ ದಿಡೀರ್ ಆಗಿ ಮುಂಜಾನೆ 6 ಗಂಟೆಗೆಯೇ 6 ಜೆಸಿಬಿಗಳು, 300ಕ್ಕೂ ಹೆಚ್ಚು ಪೊಲೀಸರು ಮತ್ತು ಜಿಬಿಎ ಮಾರ್ಷಲ್‌ಗಳನ್ನು ಬಳಸಿಕೊಂಡು 180 ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಮಕ್ಕಳು, ಬಾಣಂತಿಯರು, ವಯಸ್ಸಾದವರು, ಅನಾರೋಗ್ಯಕ್ಕೀಡಾದವರು ಸೇರಿ 2,500 ಮಂದಿ ಈಗ ಬೀದಿಪಾಲಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...