PM E-ಡ್ರೈವ್ ಯೋಜನೆ | ರಾಜ್ಯಕ್ಕೆ ಹಂತ ಹಂತವಾಗಿ ವಿದ್ಯುತ್‌ ಚಾಲಿತ ಬಸ್‌ ಹಂಚಿಕೆ: ಕೇಂದ್ರ ಸಚಿವ ಕುಮಾರಸ್ವಾಮಿ

Date:

ಕೇಂದ್ರ ಸರಕಾರದ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನವದೆಹಲಿಯ ಸಚಿವಲಾಯದಲ್ಲಿ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ. PM E-ಡ್ರೈವ್ ಯೋಜನೆ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕವೂ ಸೇರಿ ಭಾರತದಾದ್ಯಂತ ವಿದ್ಯುತ್‌ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ” ಎಂದು ತಿಳಿಸಿದ್ದಾರೆ.

“PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ. ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಾಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಮೆರೆಯುತ್ತಿರುವ ಕ್ರೌರ್ಯ ಮಕ್ಕಳ ಮನಸುಗಳನ್ನೂ ಆಳಿದರೆ ಅದರ ಹೊಣೆ ಯಾರದು?

“ನಾವು ವಿದ್ಯುತ್‌ ಚಾಲಿತ ಬಸ್ಸುಗಳನ್ನು ವಿತರಿಸುತ್ತಿದ್ದೇವೆ ಎನ್ನುವುದಕ್ಕಿಂತ, ನಾವು ಭಾರತದ ಜನತೆಗೆ ಸ್ವಚ್ಛ, ಚುರುಕಾದ ಮತ್ತು ಹೆಚ್ಚು ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದೇವೆ” ಎಂದು ತಿಳಿಸಿದ ಕೇಂದ್ರ ಸಚಿವರು; ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾದ PM E-ಡ್ರೈವ್ ಉಪಕ್ರಮವು 14,028 ವಿದ್ಯುತ್‌ ಚಾಲಿತ ಬಸ್ಸುಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಕೇಂದ್ರ ಸರಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ₹10,900 ಕೋಟಿ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಸರಕಾರಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ ಈ ಪರಿವರ್ತನಾಶೀಲ ಗುರಿಯನ್ನು ಪೂರೈಸಲು ಬೃಹತ್‌ ಕೈಗಾರಿಕಾ ಸಚಿವಾಲಯವು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...