ವಿದೇಶ ಪ್ರವಾಸ ಹೊರಟ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ: ಕಾಂಗ್ರೆಸ್ ಟೀಕೆ

Date:

ನಿರಂತರವಾಗಿ ವಿದೇಶ ಪ್ರವಾಸದಲ್ಲೇ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ. ವಿದೇಶಕ್ಕೆ ಪ್ರವಾಸ ಹೋಗುವಷ್ಟು ಶಕ್ತಿಯಿರುವ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಪೋಸ್ಟ್ ಮಾಡಿದ್ದಾರೆ. “ಪ್ರಧಾನ ಮಂತ್ರಿಗಳು ಇಂದು ಬೆಳಿಗ್ಗೆ ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ತೆರಳಿದ್ದಾರೆ. ಈ ವಿದೇಶ ಭೇಟಿಗಳಿಗೆ ಪ್ರಧಾನಿಗೆ ಶಕ್ತಿ(energy), ಉತ್ಸಾಹ(excitement) ಮತ್ತು ಹುರುಪು(enthusiasm) ಎಂಬ ಮೂರು ‘ಇ(E)’ಗಳೂ ಇವೆ” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಭಾರೀ ವಿಶ್ವಾಸದ ಮೋದಿಯ ವಿದೇಶಿ ಸಂಬಂಧಗಳು ಕುಸಿದುಬೀಳಲಿವೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿ 7 ಶೃಂಗಸಭೆಯು ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲ್ಲಿದ್ದು ಈ ಶೃಂಗಸಭೆಗೆ ಕೆನಡಾ ಭಾರತವನ್ನು ಆಹ್ವಾನಿಸಿಲ್ಲ. ಈ ವಿಚಾರದಲ್ಲಿಯೂ ಕಾಂಗ್ರೆಸ್ ನಾಯಕ ಪ್ರಧಾನಿಯನ್ನು ಟೀಕಿಸಿದ್ದಾರೆ. “ಭಾರತಕ್ಕೆ ಆಹ್ವಾನ ನೀಡಲು ಕೆನಡಾ ವಿಳಂಬ ಮಾಡುತ್ತಿರುವುದು ಕಂಡುಬಂದಾಗ ಮೋದಿಯವರ ಬಗ್ಗೆ ಡಂಗುರ ಸಾರುವವರೂ ಕೆನಡಾ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಹೇಳಿಕೊಂಡರು” ಎಂದು ವ್ಯಂಗ್ಯವಾಡಿದ್ದಾರೆ.

“ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ ಆಗಿರುವುದರಿಂದ ಭಾರತವನ್ನು ಜಿ7 ಶೃಂಗಸಭೆಗೆ ಆಹ್ವಾನಿಸಲಾಗಿದೆ ಎಂದು ಕೆನಡಾದ ಪ್ರಧಾನಿ ಹೇಳಿದ್ದಾರೆ. ಆದರೆ ನೀತಿ ಆಯೋಗದ ಸಿಇಒ ಪ್ರಕಾರ 2025ರ ಮೇ 24ರಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂಬುದನ್ನು ಪ್ರಧಾನಿ ಮೋದಿ ಅವರು ಕೆನಡಾ ಪ್ರಧಾನಿಗೆ ನೆನಪಿಸಬೇಕು” ಎಂದು ಪೋಸ್ಟ್ ಮಾಡಿದ್ದಾರೆ.

“2023ರ ಮೇ ತಿಂಗಳಿನಿಂದ ಈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 35ನೇ ಬಾರಿ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಈ ವಿದೇಶ ಪ್ರವಾಸಕ್ಕೆ ಅವರಿಗೆ ಮೂರು ‘ಇ’ಗಳಾದ ಶಕ್ತಿ(energy), ಉತ್ಸಾಹ(excitement) ಮತ್ತು ಹುರುಪು(enthusiasm) ಇರುತ್ತದೆ. ಆದರೆ ಮಣಿಪುರಕ್ಕೆ ಹೋಗಲು ನಾಲ್ಕನೇ ಈ ಸಹಾನಭೂತಿ(empathy) ಇಲ್ಲವೇ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ಕೆನಡಾದಲ್ಲಿ ಜಿ 7 ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿಗಿಲ್ಲ ಆಹ್ವಾನ

“ಮಣಿಪುರದಲ್ಲಿ ಜನರ ಸಂಕಷ್ಟ, ನೋವು ಹಾಗೆಯೇ ಇದೆ. 2023ರ ಮೇ 3ರಿಂದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿಲ್ಲ, ಮಣಿಪುರದ ರಾಜಕೀಯ ನಾಯಕರನ್ನೂ ಭೇಟಿಯಾಗಿಲ್ಲ. ಮಣಿಪುರವನ್ನು ಈ ರೀತಿ ಭೀಕರವಾಗಿ ನಡೆಸಿಕೊಂಡ ಪ್ರಧಾನಿಯ ವರ್ತನೆ ಶೋಚನೀಯ” ಎಂದು ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ 2015ರ ಪ್ರಧಾನಿಯವರ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...