ಸಂಸತ್ ಭದ್ರತಾ ಲೋಪ ಪ್ರಕರಣ ‘ಆತಂಕಕಾರಿ’: ಕೊನೆಗೂ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

Date:

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ‘ಅತ್ಯಂತ ದುಃಖಕರ ಮತ್ತು ಆತಂಕಕಾರಿ’ ಎಂದು ಹೇಳಿದ್ದಾರೆ.

‘ದೈನಿಕ್ ಜಾಗರಣ್’ ಹಿಂದಿ ಪತ್ರಿಕೆಯ ಜೊತೆಗೆ ನಡೆಸಿದ ಸಂದರ್ಶನದ ವೇಳೆ ಮಾತನಾಡಿರುವ ಅವರು, “ಸಂಸತ್ ಭದ್ರತಾ ಲೋಪ ಪ್ರಕರಣ ಅತ್ಯಂತ ದುಃಖಕರ ಮತ್ತು ಆತಂಕಕಾರಿ. ಲೋಕಸಭಾ ಸ್ಪೀಕರ್ ಈ ಪ್ರಕರಣವನ್ನು ಸಂಪೂರ್ಣ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ‘ದೈನಿಕ್ ಜಾಗರಣ್‘ಗೆ ನೀಡಿದ ಸಂದರ್ಶನದ ವೇಳೆ ಮಾತನಾಡುತ್ತಿದ್ದಾಗ ಸಂಸತ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ್ದು, ಘಟನೆ ಬಗ್ಗೆ ಚರ್ಚೆ ಅಥವಾ ಪ್ರತಿರೋಧದ ಬದಲಿಗೆ, ಅದರ ಆಳಕ್ಕೆ ಹೋಗುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ತಿನಲ್ಲಿ ನಡೆದ ಘಟನೆ ಗಂಭೀರವಾದುದು. ತನಿಖಾ ಸಂಸ್ಥೆಗಳು ಅದರ ಗಂಭೀರತೆಯನ್ನು ಅರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿವೆ. ಘಟನೆಯ ಹಿಂದಿರುವ ಅಂಶ ಮತ್ತು ಉದ್ದೇಶ ಏನಾಗಿತ್ತು ಎಂಬುದನ್ನೂ ಕೂಡ ಆಳವಾಗಿ ನೋಡುವುದು ಅಷ್ಟೇ ಮುಖ್ಯ. ಒಂದೇ ಮನಸ್ಸಿನಿಂದ ಪರಿಹಾರಗಳನ್ನೂ ಕಂಡುಕೊಳ್ಳಬೇಕು. ಪ್ರತಿಯೊಬ್ಬರೂ ಇಂತಹ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಬದಲು ಸಮಾಧಾನ ಚಿತ್ತದಿಂದ ಆಲೋಚಿಸಬೇಕು” ಎಂದು ತಿಳಿಸಿರುವುದಾಗಿ ‘ದೈನಿಕ್ ಜಾಗರಣ್’ ವರದಿ ಮಾಡಿದೆ.

ಸಂಸತ್‌ನನಲ್ಲಿ ಬಂದು ಪ್ರಧಾನಿ ಹೇಳಿಕೆ ನೀಡಲಿ: ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ

ಪ್ರಧಾನಿ ದೈನಿಕ್ ಜಾಗರಣ್‌ಗೆ ನೀಡಿರುವ ಹೇಳಿಕೆಯ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ, “ಸದನದಲ್ಲಿ ಹೇಳಿಕೆ ನೀಡುವ ಬದಲು, ಪ್ರಧಾನಿ ಮೋದಿ ಅವರು ಪತ್ರಿಕೆಯೊಂದಕ್ಕೆ ಸಂದರ್ಶನ ನೀಡುವ ಮೂಲಕ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಮಾತನಾಡುತ್ತಿದ್ದಾರೆ. ಘಟನೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರಚಿಸಬೇಕು ಮತ್ತು ಅಂತಹ ಘಟನೆ ಮತ್ತೆ ಸಂಭವಿಸುವುದಿಲ್ಲ ಎಂದು ಸಂಸತ್ತಿಗೆ ತಿಳಿಸಬೇಕು. ಘಟನೆ ನಡೆದಿರುವುದು ಸಂಸತ್‌ನ ಒಳಗೆ, ಹೊರಗಡೆ ಅಲ್ಲ. ಹಾಗಾಗಿ, ಮಾಧ್ಯಮಗಳಿಗೆ ನೀಡುವ ಸಂದರ್ಶನದ ವೇಳೆ ಹೇಳಿಕೆ ನೀಡುವ ಬದಲು, ಸಂಸತ್‌ಗೆ ಬಂದು ಪ್ರಧಾನಿ ಹೇಳಿಕೆ ನೀಡಲಿ” ಎಂದು ಪಿಟಿಐಗೆ ನೀಡಿದ ಹೇಳಿಕೆಯ ವೇಳೆ ತಿಳಿಸಿದ್ದಾರೆ.

ಆರೋಪಿಗಳ ಮೊಬೈಲ್​ನ ಬಿಡಿಭಾಗಗಳು ರಾಜಸ್ಥಾನದಲ್ಲಿ ಪತ್ತೆ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ.

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜನ್ ಸಂದನದ ಒಳಗೆ ನುಗ್ಗಿದ್ದರು. ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...