ಜನರನ್ನು ದಾರಿ ತಪ್ಪಿಸುವುದೇ ಪ್ರಧಾನಿ ಮೋದಿ ‘ಹ್ಯಾಬಿಟ್’: ಸಾಗರಿಕಾ ಘೋಷ್

Date:

ಪ್ರಧಾನಿ ಮೋದಿಗೆ ಜನರನ್ನು ದಾರಿ ತಪ್ಪಿಸುವ ಹ್ಯಾಬಿಟ್‌ (ಅಭ್ಯಾಸ) ಇದೆ ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಹೇಳಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಬಂಗಾಳದ ಲಾಠಿ ಪ್ರಹಾರ ಘಟನೆಯನ್ನು ಉಲ್ಲೇಖಿಸಿದ್ದ ಮೋದಿ, ಟಿಎಂಸಿ ವಿರುದ್ಧ ಆರೋಪ ಮಾಡಿದ್ದರು. ಮೋದಿ ಆರೋಪಕ್ಕೆ ತಿರುಗೇಟು ನೀಡಿರುವ ಘೋಷ್, “ರಾಜ್ಯ ಪೊಲೀಸರು ‘ತ್ವರಿತ ಕ್ರಮ’ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಬಂಗಾಳದಲ್ಲಿ ಪೊಲೀಸರು ಭಯದಿಂದ ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಯಾರದ್ದೇ ಪರವಾಗಿಲ್ಲ. ರಾಜ್ಯದಲ್ಲಿ ಅಪರಾಧಗಳಿಗೆ ಶೂನ್ಯ ಸಹಿಷ್ಣುತೆ ಇದೆ. ಪ್ರಕರಣದ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಆತ ಜೈಲಿನಲ್ಲಿದ್ದಾರೆ. ಪೊಲೀಸರು ಸ್ವಯಂಪ್ರೇರಿತವಾಗಿ ತನಿಖೆ ಆರಂಭಿಸಿದ್ದಾರೆ. ನೀವು (ನಿಮ್ಮ ಅಜಯ್ ಮಿಶ್ರಾ ಟೆನಿಸ್ ಮತ್ತು ಬ್ರಿಜ್ ಭೂಷಣರೊಂದಿಗೆ) ಬಂಗಾಳದಿಂದ ಕೆಲವು ವಿವೇಕಯುತ ಆಡಳಿತ ಮತ್ತು ಕಠಿಣ ಕ್ರಮಗಳ ಬಗ್ಗೆ ಕಲಿಯಬೇಕು” ಎಂದು ಘೋಷ್‌ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಬಂಗಾಳ ಸರ್ಕಾರ ಮತ್ತು ಬಂಗಾಳ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಹಿಂಸೆಗೆ ಶೂನ್ಯ ಸಹಿಷ್ಣುತೆ ಇದೆ. ಪ್ರಧಾನಿಯವರು ಮೊದಲು ತಮ್ಮ ಪಕ್ಷದಲ್ಲಿರುವ ಲೈಂಗಿಕ ಪರಭಕ್ಷಕರನ್ನು ವಜಾ ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...