ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

Date:

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ. ಅದಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮತ್ತು ಮಣಿಪುರ ಸಿಎಂ ಭಾನುವಾರ ಮಧ್ಯಾಹ್ನ ಭೇಟಿಯಾಗಿದ್ದಾರೆ.

ಮಣಿಪುರ ಗವರ್ನರ್ ಅನುಸೂಯಾ ಉಯ್ಕೆ ಅವರನ್ನು ಸ್ಥಾನದಿಂದ ವಜಾಗೊಳಿಸಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಲಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಸಭೆಯಲ್ಲಿ ಮೋದಿ ಮತ್ತು ಬಿರೇನ್ ಭೇಟಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಇಬ್ಬರೂ ಕೂಡಾ ಪ್ರತ್ಯೇಕವಾಗಿ ಸಭೆಯನ್ನು ನಡೆಸಿದ್ದಾರೆ ಎಂದು ಕೂಡಾ ಹೇಳಲಾಗಿದೆ. ಆದರೆ ಬಿರೇನ್ ಸಿಂಗ್ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿರುವ ಚಿತ್ರ ಏಕಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಶಂಕಿತ ಬಂಡುಕೋರರ ಹೊಂಚುದಾಳಿ; ಸಿಆರ್‌ಪಿಎಫ್ ಯೋಧ ಹುತಾತ್ಮ

“ಇಂದು ಬೆಳಿಗ್ಗೆ, ಮಣಿಪುರದ ವಿವಾದಿತ ಮುಖ್ಯಮಂತ್ರಿಯು ಜೈವಿಕವಲ್ಲದ ಪ್ರಧಾನ ಮಂತ್ರಿಯೊಂದಿಗೆ ಮುಚ್ಚಿದ ಬಾಗಿಲಿನ ಒಳಗೆ ಸಣ್ಣ ಸಭೆಯನ್ನು ನಡೆಸಿದರು. ಇದರಲ್ಲಿ ಸ್ವಯಂಘೋಷಿತ ಚಾಣಕ್ಯ ಮತ್ತು ರಕ್ಷಣಾ ಸಚಿವರು ಸಹ ಉಪಸ್ಥಿತರಿದ್ದರು ಎಂಬ ಸುದ್ದಿ ಹೊರಬಿದ್ದಿದೆ. ಸಾಮಾನ್ಯವಾಗಿ ಇಂತಹ ಸಭೆಗಳು ನಡೆದಾಗ ಎಕ್ಸ್‌ನಲ್ಲಿ ಚಿತ್ರಗಳನ್ನು ಹಾಕಲಾಗುತ್ತದೆ. ಆದರೆ ನರೇಂದ್ರ ಮೋದಿ ಅಥವಾ ಎನ್ ಬಿರೇನ್ ಸಿಂಗ್ ಹಾಗೆ ಮಾಡಿಲ್ಲ. ಅಂತಹ ನಿರಾಸಕ್ತಿ ಏಕೆ? ಅಥವಾ ಸಭೆ ನಿಜವಾಗಿ ನಡೆಯಲಿಲ್ಲವೇ” ಎಂದು ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್ ಪ್ರಶ್ನಿಸಿದರು.

2023ರ ಮೇ ತಿಂಗಳಲ್ಲಿ ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿದ್ದು, 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಆದರೆ ಪ್ರಧಾನಿ ಮೋದಿ ಇತ್ತೀಚೆಗೆ ವಿಪಕ್ಷಗಳ ಒತ್ತಡದಿಂದಾಗಿ ಹಿಂಸಾಚಾರದ ಬಗ್ಗೆ ಸದನದಲ್ಲಿ ಮಾತನಾಡಿದ್ದಾರೆ. ಈವರೆಗೂ ಹಿಂಸಾಚಾರಪೀಡಿತ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡಿಲ್ಲ. ಅಲ್ಲಿನ ಮುಖ್ಯಮಂತ್ರಿಯನ್ನು ಕೂಡಾ ಭೇಟಿಯಾಗಿರಲಿಲ್ಲ.

ಬಿರೇನ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾತ್ರ ಭೇಟಿ ಮಾಡಿದ್ದಾರೆ. ಇತ್ತೀಚೆಗೆ ಫೆಬ್ರವರಿಯಲ್ಲಿ ಸಭೆಯನ್ನು ಕೂಡಾ ನಡೆಸಿದ್ದಾರೆ. ಪ್ರಧಾನಿ ಮೋದಿ ಮಣಿಪುರ ಹಿಂಸಾಚಾರದ ಬಗ್ಗೆ ಮೌನ ತಳೆದಿರುವುದು ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...