ಸನಾತನ ವಿವಾದ: ಬಿಜೆಪಿ ಸಚಿವರಿಗೆ ಪ್ರಧಾನಿ ಸೂಚನೆ

Date:

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾವು ಸರಿಯಾಗಿ ಉತ್ತರ ನೀಡಬೇಕಿದೆ’ ಎಂದು ಬಿಜೆಪಿ ಸಚಿವರಿಗೆ ಸೂಚಿಸಿದ್ದಾರೆ.

ಜಿ20 ಸಮಿತಿಯ ಸಭೆಗೂ ಮುನ್ನ ಸಂಪುಟದ ಸಚಿವರೊಂದಿಗೆ ಸಮಾಲೋಚನೆ ಮಾಡಲು ಕರೆದಿದ್ದ ಸಭೆಯಲ್ಲಿ ನರೇಂದ್ರ ಮೋದಿ ಈ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಜೊತೆಗೆ, ಇಂಡಿಯಾ – ಭಾರತ ಕುರಿತ ಹೇಳಿಕೆಗಳನ್ನು ನೀಡದಂತೆ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.

ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರು, ‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕಿದೆ’ ಎಂದು ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮವು ಮಲೇರಿಯಾ, ಡೆಂಗ್ಯೂ ಮತ್ತು ಕೊರೊನಾ ವೈರಸ್‌ನಂತೆ ಕೆಲಸ ಮಾಡುತ್ತದೆ. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದನ್ನು ನಿರ್ಮೂಲನೆ ಮಾಡಬೇಕಿದೆ ಎಂದು ಕರೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 2019ರ ಚುನಾವಣೆಗಾಗಿ ಕೇಂದ್ರಕ್ಕೆ 3 ಲಕ್ಷ ಕೋಟಿ ರೂ.ಹಣ ವರ್ಗಾವಣೆಗೆ ನಿರಾಕರಿಸಿದ್ದ ಆರ್‌ಬಿಐ

ಪ್ರಗತಿಪರರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಉದಯನಿಧಿ, ‘ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಮಲೇರಿಯಾ, ಸೊಳ್ಳೆ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದರಂತೆ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ತಿಳಿಸಿದ್ದರು.

ಉದಯನಿಧಿ ಸ್ಟಾಲಿನ್‌ ಹೇಳಿಕೆಯನ್ನು ಬೆಂಬಲಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮನುಷ್ಯನ ಘಟನೆ ಹಾಗೂ ಸಮಾನತೆಯನ್ನು ಪ್ರತಿಪಾದಿಸದೇ ಇರುವುದು ಧರ್ಮವೇ ಅಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...