ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

Date:

17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ) ಅಲೋಕ್ ಮೋಹನ್ ಅವರು ಈ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಅಧಿಕೃತ ಆದೇಶವನ್ನೂ ಕೂಡ ಹೊರಡಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ್, “ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಮೇಲಿನ ಆರೋಪದ ಬಗ್ಗೆ ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಟಿ ನಡೆಸಿದ್ದ ಯಡಿಯೂರಪ್ಪ, ”ಒಬ್ಬರಿಗೆ ಉಪಕಾರ ಮಾಡುವುದಕ್ಕೆ ಹೋಗಿ ಹೀಗಾಗಿದೆ. ಪ್ರಕರಣ ದಾಖಲಾಗಿದೆ. ರಾಜಕಾರಣ ಯಾರೂ ಮಾಡ್ತಿಲ್ಲ. ಇದನ್ನು ಹೇಗೆ ಎದುರಿಸಬೇಕೋ ಹಾಗೆಯೇ ಎದುರಿಸುವೆ. ಆದರೆ ಇದನ್ನೆಲ್ಲ ನಿರೀಕ್ಷೆ ಮಾಡಿರಲಿಲ್ಲ” ಎಂದು ತಿಳಿಸಿದ್ದರು.

ಏನಿದು ಪ್ರಕರಣ?
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಬಿಎಸ್‌ವೈ ವಿರುದ್ಧ ಪೋಕ್ಸೊ | ‘ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ’: FIRನಲ್ಲಿ ಇರೋದೇನು?

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...