ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ

Date:

ಪೋಕ್ಸೊ ಪ್ರಕರಣ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ)ದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸೂಚಿಸಿದೆ. ಈ ನಡುವೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್​ಶೀಟ್‌ನಲ್ಲಿ ಬಾಲಕಿ ದಾಖಲಿಸಿದ್ದ ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ಯಡಿಯೂರಪ್ಪ ಅವರು ರೂಮಿಗೆ ಕರೆದೊಯ್ದು ಅನುಚಿತವಾಗಿ ವರ್ತಿಸಿರುವುದನ್ನು ಉಲ್ಲೇಖಿಸಲಾಗಿದೆ.

ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ. ನಂತರ ಬಾಲಕಿಯ ತಾಯಿ ಇದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲಿಟ್​ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ ಎಂ ಅರುಣ್, ಎಂ ರುದ್ರೇಶ್, ಜಿ ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲಿಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ನಾಲ್ವರ ವಿರುದ್ದವೂ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಹಿನ್ನೆಲೆ

ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಮೂರು ತಿಂಗಳ ಹಿಂದೆ ದೂರು ನೀಡಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ನೋಟಿಸ್‌ ನೀಡಿದರೂ ಯಡಿಯೂರಪ್ಪ ತನಿಖೆಗೆ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್‌ ಮೊರೆ ಹೋಗಿತ್ತು. ಬೆಂಗಳೂರು ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರೆಂಟ್‌ ಜಾರಿ ಮಾಡಲು ಆದೇಶಿಸಿತ್ತು. ಆದರೆ, ಬಂಧನ ಮಾಡದಂತೆ ಹೈಕೋರ್ಟ್‌ನಲ್ಲಿ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬಂಧನ ಮಾಡದಂತೆ ಹಾಗೂ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...