ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

Date:

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಎಸ್‌ವೈ, “ತಾಯಿ ಮಗಳು ತೊಂದರೆಯಲ್ಲಿದ್ದೇವೆ ಎಂದು ಹೇಳುತ್ತಾ ಕಣ್ಣೀರು ಹಾಕಿಕೊಂಡು ಬಂದಿದ್ದರು. ಅವರಿಗೆ ಸಹಾಯ ಮಾಡಿದೀನಿ. ಆದರೆ, ಈಗ ಈ ರೀತಿ ದೂರು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ಮನೆಯ ಬಳಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ, “ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ ಬಂದಿದ್ದರು. ಅವರು ಅವತ್ತು ನನಗೆ ಅನ್ಯಾಯ ಆಗಿದೆ ಅಂತ ಹೇಳಿದ್ದರು. ಹಲವೊಮ್ಮೆ ಬಂದು ಮನೆ ಬಳಿ ಕಾಯುತ್ತಿದ್ದರು. ಒಮ್ಮೆ ಕಣ್ಣೀರು ಹಾಕುತ್ತಿದ್ದುದನ್ನು ನೋಡಿ, ಮನೆಯೊಳಗೆ ಕರೆದೊಯ್ದೆ. ಏನು ಸಮಸ್ಯೆ ಎಂದು ಆಲಿಸಿ ಬೆಂಗಳೂರು ಪೊಲೀಸ್ ಕಮಿಷನರ್‌ ದಯಾನಂದ್ ಅವರಿಗೆ ಫೋನ್ ಮಾಡಿ ಇವರ ಸಮಸ್ಯೆ ಬಗೆಹರಿಸಲು ಹೇಳಿದ್ದೆ. ಅಲ್ಲೇ, ನನ್ನ ವಿರುದ್ಧವೇ ಮಾತಾಡೋಕೆ ಶುರು ಮಾಡಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ವಿರುದ್ಧವೇ ಮಾತಾಡೋಕೆ ಶುರು ಮಾಡಿದಾಗ ಏನೋ ಆರೋಗ್ಯ ಸಮಸ್ಯೆ ಇದೆ ಅಂತ ಅನಿಸ್ತು. ಹೆಚ್ಚು ಮಾತಾಡಿದರೆ ಆಗಲ್ಲ ಎಂದು ಪೊಲೀಸರ ಬಳಿಗೆ ಕಳಿಸಿಕೊಟ್ಟೆ. ಇದನ್ನು ಈಗ ಬೇರೆ ರೀತಿಯಲ್ಲಿ ತಿರುಗಿಸಿದ್ದಾರೆ. ತೊಂದರೆ ಇದೆ ಅಂದಿದ್ದಕ್ಕೆ ಹಣವನ್ನೂ ಕೊಟ್ಟು ಕಳಿಸಿದ್ದೆ. ಒಬ್ಬರಿಗೆ ಉಪಕಾರ ಮಾಡುವುದಕ್ಕೆ ಹೋಗಿ ಹೀಗಾಗಿದೆ” ಎಂದು ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕಿ ಮೇಲೆ ಲೈಂಗಿಕ‌ ದೌರ್ಜನ್ಯ | ಯಡಿಯೂರಪ್ಪ ವಿರುದ್ಧ ಎಫ್‌ಐಆರ್

ಈ ದೂರಿನ ಹಿಂದೆ ರಾಜಕೀಯ ಪ್ರೇರಿತವೇ ಎಂದು ಕೇಳಿದಾಗ, “ಪ್ರಕರಣ ದಾಖಲಾಗಿದೆ. ರಾಜಕಾರಣ ಯಾರೂ ಮಾಡ್ತಿಲ್ಲ. ಇದನ್ನು ಹೇಗೆ ಎದುರಿಸಬೇಕೋ ಹಾಗೆಯೇ ಎದುರಿಸುವೆ. ಆದರೆ ಇದನ್ನೆಲ್ಲ ನಿರೀಕ್ಷೆ ಮಾಡಿರಲಿಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...