ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

Date:

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

ಪೋಕ್ಸೊ ಪ್ರಕರಣದಲ್ಲಿ ತಮ್ಮ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಲು ಸಿಐಡಿ ಪೊಲೀಸರು ವಿಚಾರಣಾಧೀನ ನ್ಯಾಯಾಲಯದಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ವಿಚಾರ ಹೊರಬೀಳುತ್ತಲೇ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು, “ಮುಂದಿನ ವಿಚಾರಣೆಯವರೆಗೆ ಬಿಎಸ್‌ವೈ ಅವರನ್ನು ಪೊಲೀಸರು ಬಂಧನ ಮಾಡಬಾರದು. ಜೂನ್‌ 17ರಂದು ಬಿಎಸ್‌ವೈ ವಿಚಾರಣೆಗೆ ಹಾಜರಾಗಬೇಕು” ಆದೇಶಿಸಿ ವಿಚಾರಣೆ ಮುಂದೂಡಿತು. ಅಲ್ಲದೇ, ಪ್ರಕರಣದ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಕೂಡ ಜಾರಿ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಬೆಂಗಳೂರು ನಗರದ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಗುರುವಾರ ಪುರಸ್ಕರಿಸಿತ್ತು. ಇದರಿಂದ ಬಂಧನ ಭೀತಿ ಎದುರಿಸುತ್ತಿದ್ದರು. ಸದ್ಯ ಹೈಕೋರ್ಟ್‌ ಆದೆಶದಿಂದ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.

ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರೆ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ರಾಜ್ಯ ಸರ್ಕಾರ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿ, “ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ” ಎಂದು ಪೊಲೀಸರಿಗೆ ತಿಳಿಸಿದ್ದರು.

ಇದನ್ನು ಓದಿದ್ದೀರಾ? ಗುಜರಾತ್‌ | ಸಿಎಂ ವಸತಿ ಯೋಜನೆಯಡಿ ಮುಸ್ಲಿಂ ಮಹಿಳೆಗೆ ಫ್ಲ್ಯಾಟ್ ಮಂಜೂರು; ಹಿಂದುಗಳಿಂದ ವಿರೋಧ

ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪ ಅವರು ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಬಾಲಕಿಯ ತಾಯಿ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...