ಭ್ರಷ್ಟ ಕೃತ್ಯಗಳಲ್ಲಿ ತೊಡಗುವ ಪೊಲೀಸರು ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ನಾನು ಯಾರಿಂದಲೂ ಎಂದಿಗೂ ಒಂದು ಪೈಸೆ ಲಂಚ ಪಡೆದಿಲ್ಲ. ನಾನು ಲಂಚ ಪಡೆದಿರುವುದು ಸಾಬೀತುಪಡಿಸಿದರೆ ಆ ಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಭ್ರಷ್ಟಾಚಾರದ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರನ್ನು ಸೇವೆಯಿಂದಲೇ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, “ಪೊಲೀಸ್ ಇಲಾಖೆಯಲ್ಲಿ ಲಂಚ ಪಡೆಯುವುದು ನಡೆಯುತ್ತಿದೆ ಎಂಬ ಆರೋಪಗಳಿವೆ. ಅದಕ್ಕೆ ಕಡಿವಾಣ ಹಾಕಲಾಗುತ್ತಿದೆ. ಲಂಚ ಪ್ರಕರಣಗಳಲ್ಲಿ ಭಾಗಿಯಾಗಿರುವ 124 ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ” ಎಂದಿದ್ದಾರೆ.

“ಇತ್ತೀಚೆಗೆ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದಲ್ಲಿ ಓರ್ವ ಪೊಲೀಸ್‌ ಪೇದೆ ಭಾಗಿಯಾಗಿದ್ದು, ಆತನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅಂತೆಯೇ, ದಾವಣಗೆರೆಯಲ್ಲಿ ಚಿನ್ನಭಾರಣ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಓರ್ವ ಪ್ರೊಬೆಷನರಿ ಪಿಎಸ್‌ಐಅನ್ನು ವಜಾ ಮಾಡಲಾಗಿದೆ. ಮತ್ತೊಬ್ಬ ಪಿಎಸ್‌ಐ ಅಮಾನತು ಮಾಡಿದ್ದೇವೆ. ಕೋಲಾರದ ಪೊಲೀಸ್ ಸಿಬ್ಬಂದಿಯನ್ನು ವಜಾ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...