ತೆಲಂಗಾಣ | ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ

Date:

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ತಂಗಿದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು ಬುಧವಾರ ತಡರಾತ್ರಿ ದಾಳಿ ನಡೆಸಿರುವ ಘಟನೆ ನಡೆದಿದೆ.

ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ‘ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು’ ಎಂದು ತಿಳಿಸಿದ್ದಾರೆ.

‘ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್‌ ಸರ್ಕಾರ ಹತಾಶೆಗೊಂಡಿದೆ. ಹಾಗಾಗಿ ಜಂಟಿ ರಾಜಕೀಯ ದಾಳಿ ನಡೆಸಿವೆ. ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ. ಇದಕ್ಕೆಲ್ಲ ನಾವು ಹೆದರಲ್ಲ’ ಎಂದು ಜಮೀರ್ ಅಹ್ಮದ್ ಖಾನ್ ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...