ಪೊಲೀಸ್‌ ಠಾಣೆಯಲ್ಲಿ ಮಹಿಳೆ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ; ವಿಡಿಯೋ ವೈರಲ್ – ಆಕ್ರೋಶ

Date:

ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ನಾಯಕನೊಬ್ಬ ಮಹಿಳೆಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾದಲ್ಲಿ ನಡೆದಿದೆ. ಬಿಜೆಪಿ ನಾಯಕ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳು ಪೊಲೀಸ್‌ ಠಾಣೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬೇಟಿ ಬಚಾವೋ – ಬೇಟಿ ಪಡಾವೋ’ ಎಂದು ಮಹಿಳೆಯರ ಮೇಲೆಯೇ ಹಲ್ಲೆ ಎಸಗುತ್ತಿದ್ದಾರೆಂದು ಬಿಜೆಪಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕ, ಮಲ್ಕಾಪುರ ಕೃಷಿ ಸಮಿತಿ ಅಧ್ಯಕ್ಷ ಶಿವಚಂದ್ರ ತಾಯ್ಡೆ ಎಂಬುವವರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬುಲ್ಡಾನಾದ ಮಲ್ಕಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಘಟನೆ ನಡೆಸಿದ್ದು, ಇದೀಗ ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯ ಸೋದರ ಸಂಬಂಧಿಯಾಗಿರುವ ಶಿವಚಂದ್ರ ತಾಯ್ಡೆ ವಿರುದ್ಧ ಸಂತ್ರಸ್ತ ಮಹಿಳೆ, ಆಕೆಯ ಪತಿ ಹಾಗೂ ಅತ್ತ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ, ಪೊಲೀಸ್ ಅಧಿಕಾರಿಯೊಂದಿಗೆ ಮಾತನಾಡುವಾಗ ಮಹಿಳೆ ಬಿಜೆಪಿ ನಾಯಕನ ಮಾತುಗಳನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಇದರಿಂದ ಕೋಪಗೊಂಡ ತಾಯ್ಡೆ ಆಕೆಯ ಫೋನ್‌ ಕಿತ್ತುಕೊಂಡು, ಕಪಾಳೆಗೆ ಹೊಡೆದಿದ್ದಾರೆ ಎಂದು ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋವನ್ನು ಶಿವಸೇನಾ (ಯುಬಿಟಿ) ವಕ್ತಾರೆ ಸುಷ್ಮಾ ಅಂಧಾರೆ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, “ಬಿಜೆಪಿಯ ಸ್ಥಳೀಯ ಮುಖಂಡ ಶಿವ ತಾಯ್ಡೆ ಅವರು ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಗೃಹ ಸಚಿವರು ಮತ್ತು ಪೊಲೀಸ್ ಅಧಿಕಾರಿಗೆ ನಾಚಿಕೆಯಾಗುತ್ತಿಲ್ಲವೇ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...