ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

Date:

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು ಭಕ್ತರಿಂದ ಖರ್ಗೆ ಕುಟುಂಬದ ವಿರುದ್ಧ ಬಣ್ಣ, ಜಾತಿ ಆಧಾರದ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಲೇ ಇವೆ. ಇದು ದ್ವೇಷ ಮಾತ್ರವಲ್ಲ, ಸಾಮಾಜಿಕ ನ್ಯಾಯದ ವಿರುದ್ಧದ ವಿಕೃತಿಯೂ ಆಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೂ ಹೋಗಬಹುದು ಎಂದು ವೈದ್ಯರು ಹೇಳಿದ್ದಾರೆ. ಇದೇ ಹೊತ್ತಿನಲ್ಲಿ, ಬಿಜೆಪಿಗರ ರಾಜಕೀಯ ವಿಕೃತಿ, ನಂಜಿನ ಮನಸ್ಥಿತಿ ಮತ್ತೊಮ್ಮೆ ದೇಶದ ಎದುರು ಅನಾವರಣಗೊಂಡಿದೆ. ಅನಾರೋಗ್ಯವನ್ನೂ ಅಪಹಾಸ್ಯ ಮಾಡುವ, ಸಾವನ್ನೂ ಬಯಸುವ ಬಿಜೆಪಿ ಬೆಂಬಲಿಗರು ದೇಶದ ಮುಂದೆ ಬೆತ್ತಲಾಗಿದ್ದಾರೆ.

ದ್ವೇಷವೆಂಬ ನಂಜು ಭಾರತದ ರಾಜಕಾರಣದ ರಕ್ತದಲ್ಲಿಯೇ ಬೆರೆತುಹೋಗಿದೆ ಎಂಬ ಮಾತುಗಳು ಆಗಾಗ್ಗೆ ಕೇಳಿಬರುತ್ತವೆ. ಅದು, ಪ್ರಧಾನಿ ಮೋದಿ ಆಡಳಿತದಲ್ಲಿ ಅತ್ಯಂತ ಕೀಳುಮಟ್ಟಕ್ಕೆ ಇಳಿದಿದೆ. ಮೋದಿ ಭಕ್ತರು ಮತ್ತು ಬಿಜೆಪಿ ಬೆಂಬಲಿಗರ ವಿಷಪೂರಿತ ವಿಕೃತಿಯು ಎಲ್ಲ ಎಲ್ಲೆಗಳನ್ನು ಮೀರಿದೆ. ಅದು ಖರ್ಗೆ ಅವರ ಅನಾರೋಗ್ಯದ ವಿಚಾರದಲ್ಲಿ ಬಟಾಬಯಲಾಗಿದೆ.

ಖರ್ಗೆ ಅವರು ಅನಾರೋಗ್ಯಕ್ಕೆ ತುತ್ತಾಗಿರುವುದನ್ನು ಬಿಜೆಪಿಗರು ರಾಜಕೀಯವಾಗಿ ನೋಡುತ್ತಿದ್ದಾರೆ. ‘ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕರು ನಿರಂತರವಾಗಿ ದೂಷಿಸುತ್ತಿದ್ದರು. ಅವರಿಗೆ ನವರಾತ್ರಿಯ ದಿನಗಳಲ್ಲಿ ತಕ್ಕ ಶಾಸ್ತಿಯಾಗಿದೆ. ದುರ್ಗಿಯು ಖರ್ಗೆ ಅವರನ್ನು ತನ್ನಲ್ಲಿಗೆ ಕರೆದೊಯ್ಯುತ್ತಿದ್ದಾಳೆ’ ಎಂಬಂತ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡುತ್ತಿದ್ದಾರೆ. ವಿಕೃತಿ ಮರೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೇಗ ಸಿಹಿ ಸುದ್ದಿ ಬರಲಿ ದುರ್ಗಾ ತಾಯಿ’, ‘ದೇವರೇ ಇವನನ್ನು ಬೇಗ ಮೇಲಕ್ಕೆ ಕರೆದೊಕೋ’, ‘ತುಂಬಾ ಸಂತೋಷದ ವಿಷಯ’, ‘ಪವಿತ್ರ ನವರಾತ್ರಿಯಲ್ಲಿ ದುಷ್ಟ ಶಕ್ತಿ ತೊಲಗಲಿ’, ‘ಮೋದಿಗೆ ಯಾರು ಶಾಪ ಹಾಕಬೇಡಿ. ಅವರಿಗೆ ಶಾಪ ಹಾಕಿದರೆ ದುಷ್ಪರಿಣಾಮ ಬೀಳುತ್ತೆ. ನಿಮ್ಮ ಲೈಫ್ ಅಲ್ಲಿ ಇದು. ಅಂತೂ ಸತ್ಯ’, ‘ನವರಾತ್ರಿಯಲ್ಲಿ ಮಹಿಷಾಸುರನ ಸಂಹಾರ ಆಗಿತ್ತು ನವರಾತ್ರಿಯಲ್ಲಿ ಕೆಟ್ಟದ್ದು ಇರಬಾರದು ಅಂತ ತಾಯಿ ಚಾಮುಂಡೇಶ್ವರಿ ಬಯಸಿದ್ದಾಳೆ ಅನ್ನಿಸುತ್ತೆ’ ಎಂದೆಲ್ಲ ಬಿಜೆಪಿ ಬೆಂಬಲಿಗರು ಮತ್ತು ಮೋದಿ ಭಕ್ತರು ತಮ್ಮಲ್ಲಿರುವ ದ್ವೇಷವನ್ನು ಹೊರಹಾಕುತ್ತಿದ್ದಾರೆ.

ಬಿಜೆಪಿಗರ ಇಂತಹ ವಿಕೃತ ಮನೋಭಾವ ಬಹಿರಂಗವಾಗಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ, 2022ರಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಇಂತಹದ್ದೇ ದ್ವೇಷ ಭಾಷಣ ಮಾಡಿದ್ದರು. ಅವರಿಬ್ಬರ ವಿರುದ್ಧ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಇದೇ ರೀತಿ, ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ನಾಯಕ, ಸಚಿವ ರವ್ನೀತ್ ಸಿಂಗ್ ಬಿಟ್ಟು ಅವರು, ”ಪಂಜಾಬ್‌ನಲ್ಲಿ ಗಾಂಧಿ ಕುಟುಂಬದ ಕಾರಣದಿಂದ ನಮ್ಮ ಪೀಳಿಗೆ ನಾಶವಾಗಿದೆ. ಅವರು ಪಂಜಾಬ್ ಅನ್ನು ದಹಿಸಿದ್ದಾರೆ. ರಾಹುಲ್‌ ಗಾಂಧಿ ನಂಬರ್ 1 ಆತಂಕವಾದಿ” ಎಂದು ವಾಗ್ದಾಳಿ ನಡೆಸಿದ್ದರು.

ಈ ಲೇಖನ ಓದಿದ್ದೀರಾ?: ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ, ದೇವತೆ ಸ್ಥಾನ ನೀಡುವ ದೇಶ ಭಾರತ ಎನ್ನುವುದು ಬರೀ ಭ್ರಮೆ!

ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರ ದ್ವೇಷಪೂರಿತ ಹೇಳಿಕೆಗಳು, ಕಮೆಂಟ್‌ಗಳು 2023 ಮತ್ತು 2024ರಲ್ಲಿ ಹೆಚ್ಚಾಗಿವೆ. 2022ರಿಂದ ಈವರೆಗೆ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ 654 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಕಾಂಗ್ರೆಸ್‌ನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿದವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ/ರಾಜ್ಯಸಭೆಗಳ ವಿಪಕ್ಷ ನಾಯಕನವರೆಗೆ ಬೆಳೆದವರು. ದಲಿತ ಸಮುದಾಯಕ್ಕೆ ಶ್ರಮಿಸಿದವರು. ಅವರ ಬೆಳವಣಿಗೆಯು ಮನುವಾದಿ ಸಿದ್ಧಾಂತವನ್ನೇ ಜೀವಾಳ ಮಾಡಿಕೊಂಡಿರುವ ಬಿಜೆಪಿಗರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆ ಕಾರಣಕ್ಕಾಗಿಯೇ ಖರ್ಗೆ ಕುಟುಂಬದ ವಿರುದ್ಧ ಬಣ್ಣ, ಜಾತಿ ಆಧಾರದ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಲೇ ಇವೆ. ಇದು ದ್ವೇಷ ಮಾತ್ರವಲ್ಲ, ಸಾಮಾಜಿಕ ನ್ಯಾಯದ ವಿರುದ್ಧದ ವಿಕೃತಿಯೂ ಆಗಿದೆ.

ಇಂತಹ ವಿಕೃತಿಗಳ ವಿರುದ್ಧ ವ್ಯವಸ್ಥೆಯು ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಆದರೆ, ವ್ಯವಸ್ಥೆಯು ಮೌನವಾಗಿದೆ. ವಿಕೃತಿಯನ್ನು ಮೌನವಾಗಿ ಆನಂದಿಸುತ್ತಿದೆ. ವ್ಯವಸ್ಥೆಯು ಎಚ್ಚೆತ್ತುಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹರಿಯುತ್ತಿರುವ ದ್ವೇಷದ ಹೊಳೆಯನ್ನು ನಿಯಂತ್ರಿಸದಿದ್ದರೆ, ದೇಶದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...