9 ರಾಜ್ಯಗಳಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು 4 ನೇ ಹಂತದ ಮತದಾನ

Date:

ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 96 ಕ್ಷೇತ್ರಗಳ ಮತದಾರರು ಇಂದು (ಮೇ 13) ನಾಲ್ಕನೇ ಹಂತದ ಚುನಾವಣೆಯಲ್ಲಿ ನಡೆಯುತ್ತಿದೆ. ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿಯೂ ಕೂಡಾ ಏಕಕಾಲಕ್ಕೆ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಆಂಧ್ರ ಪ್ರದೇಶ (25), ಬಿಹಾರ (5), ಜಾರ್ಖಂಡ್ (4), ಮಧ್ಯಪ್ರದೇಶ (8), ಮಹಾರಾಷ್ಟ್ರ (11), ಒಡಿಶಾ (4), ತೆಲಂಗಾಣ (17), ಉತ್ತರ ಪ್ರದೇಶ (13) , ಪಶ್ಚಿಮ ಬಂಗಾಳ (8), ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ (1) ಇಂದು ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

96 ಸ್ಥಾನಗಳಲ್ಲಿ ನಲವತ್ತೆರಡು ಕ್ಷೇತ್ರಗಳು (ಶೇ. 44) ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹರಡಿಕೊಂಡಿವೆ. ಈ ಹಂತದಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಮತದಾನ ಮುಕ್ತಾಯವಾಗಲಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಕಾಂಗ್ರೆಸ್ ಅನ್ನು ಹಾಡಿ ಹೊಗಳಿ ಬಿಜೆಪಿಯನ್ನು ತೆಗಳಿದ ಚಕ್ರವರ್ತಿ ಸೂಲಿಬೆಲೆ!

2019 ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮೊದಲ ಚುನಾವಣೆ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಲ್ಲಿ ಒಂದಾದ ಶ್ರೀನಗರ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇನ್ನು ಅನಂತನಾಗ್-ರಾಜೌರಿ ಕ್ಷೇತ್ರದಲ್ಲಿ ಮೇ 25ರಂದು ಮತದಾನ ನಡೆಯಲಿದೆ.

ಈ ಹಂತದ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್‌ನಂತಹ ಅಲಿಪ್ತ ಪಕ್ಷಗಳು ಪ್ರಾಬಲ್ಯ ಹೊಂದಿವೆ. ಈ ಎರಡೂ ಪಕ್ಷಗಳು ಕೂಡಾ ಸಂಸತ್ತಿನಲ್ಲಿ ಅನೇಕ ಬಾರಿ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬೆಂಬಲ ನೀಡಿದೆ. ಆದರೆ ಈ ಚುನಾವಣೆಯಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಕೂಟವಾಗಲಿ ಅಥವಾ ಇಂಡಿಯಾ ಮೈತ್ರಿಕೂಟವಾಗಲಿ ಯಾವುದಕ್ಕೂ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...