ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15ರ ನಂತರ ತೀರ್ಮಾನ: ಬೊಮ್ಮಾಯಿ

Date:

  • ‘ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿರುವೆ’
  • ‘ಈ ಸರ್ಕಾರದ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ’

ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, “ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಚದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ” ಎಂದರು.

“ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...