ಜೈಕಾರ ಕೂಗಿ, ಪೋಸ್ಟರ್‌ ಹಾಕಿ ಪೋಸ್‌ ಕೊಡೋದ್ರಿಂದ ಲೀಡರ್ ಆಗಲ್ಲ: ಡಿ.ಕೆ ಶಿವಕುಮಾರ್

Date:

ಮಂತ್ರಿಗಳು ಬಂದಾಗ ವಿಮಾನ ನಿಲ್ದಾಣಕ್ಕೆ ಬಂದು ಜೈಕಾರ ಕೂಗುವುದು, ಬ್ಯಾನರ್, ಪೋಸ್ಟರ್ ಹಾಕಿ ಪೋಸ್ ಕೊಡೋದ್ರಿಂದ ಲೀಡರ್ ಹಾಗೋದಿಲ್ಲ. ಪಕ್ಷಕ್ಕೂ ಪ್ರಯೋಜನ ಇಲ್ಲ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ, ಬೂತ್ ಲೀಡರ್‌ಗಳನ್ನು ತಯಾರು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. “ಕೇವಲ ನಾಯಕರು ಬಂದಾಗ ಜೈಕಾರ ಹಾಕ್ತೀರಿ. ಆದರೆ ನೀವು ಮನೆ ಮನೆಗೆ ಹೋಗಿ ಪಕ್ಷದ ಸಾಧನೆ, ಸರ್ಕಾರದ ಸಾಧನೆಯ ಪ್ರಚಾರ ಮಾಡ್ತಾ ಇಲ್ಲ ಅನ್ನೋದು ನಮ್ಮ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಇನ್ನಾದರೂ ಫೀಲ್ಡಿಗೆ ಇಳಿಯಿರಿ” ಎಂದು ಖಡಕ್ಕಾಗಿ ಹೇಳಿದ್ದಾರೆ.

“ಪಕ್ಷದಿಂದ ಶಾಸಕರಾಗಿದ್ದೀರಿ, ಸಂಸದರಾಗಿದ್ದೀರಿ. ಪಕ್ಷ ನಿಮಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷಕ್ಕೆ ನೀವು ಕೂಡ ಕೊಡುಗೆ ನೀಡಬೇಕು. ನೀವು ಪಕ್ಷದ ತಳ ಮಟ್ಟದ ನಾಯಕನನ್ನು ತಯಾರು ಮಾಡಬೇಕು” ಎಂದು ಪಕ್ಷದ ಹಲವು ಮುಖಂಡರಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿಗಳ ಜಾರಿಗಾಗಿ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಸಮಿತಿ ರಚನೆಯಾಗುತ್ತದೆ. ಈ ಗ್ಯಾರಂಟಿ ಸಮಿತಿಗೆ ಮನೆ ಮನೆಗೆ ಹೋಗಿ ಪ್ರಚಾರ ಮಾಡಬಲ್ಲ ಕಾರ್ಯಕರ್ತರಿಗೆ ಮಾತ್ರ ಅವಕಾಶ ಕೊಡಿ. ಪಕ್ಷ ಸಂಘಟಿಸುವಾಗ ಸಣ್ಣ ಪುಟ್ಟ ಮನಸ್ತಾಪಕ್ಕಾಗಿ ಯಾರನ್ನು ಪಕ್ಷದಿಂದ ಉಚ್ಚಾಟಿಸುವುದು, ಹೊರ ಕಳಿಸುವ ಕೆಲಸ ಮಾಡಬೇಡಿ. ಸಾಧ್ಯವಾದರೆ ಹೊರಗಿನವರನ್ನು ಪಕ್ಷಕ್ಕೆ ಕರೆ ತನ್ನಿ” ಎಂದು ತಿಳಿಸಿದರು.

“ನಾವು ನಿರಂತರವಾಗಿ ಸೋಲುತ್ತಿದ್ದಚಿಕ್ಕಮಗಳೂರು, ಮಂಡ್ಯ, ಮಡಿಕೇರಿ, ರಾಮನಗರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದೇವೆ. ಅದು ನಮ್ಮ ಪರಿಶ್ರಮದ ಫಲ. ಕರಾವಳಿಯಲ್ಲೂ ಪರಿಶ್ರಮ ಪಟ್ಟರೆ ಪಾರ್ಲಿಮೆಂಟ್ ಚುನಾವಣೆ ಗೆಲ್ಲಬಹುದು. ನಮ್ಮ ಗ್ಯಾರಂಟಿ ಯೋಜನೆಗಳೇ ನಮಗೆ ಶ್ರೀರಕ್ಷೆ. ಪಕ್ಷದ ಕಾರ್ಯಕರ್ತರಿಗೂ ಹುದ್ದೆಗಳನ್ನು ಕೊಡ್ತೇವೆ. ಇನ್ನು ಸಮಯ ವ್ಯರ್ಥ ಮಾಡಬೇಡಿ” ಎಂದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್, ಎಐಸಿಸಿ ಕಾರ್ಯದರ್ಶಿ ರೋಝಿ ಜಾನ್, ಮಾಜಿ ಸಚಿವ ಬಿ.ರಮಾನಾಥ ರೈ , ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ .ಹರೀಶ್ ಕುಮಾರ್, ಶಾಸಕರಾದ ಮಂಜುನಾಥ್ ಭಂಡಾರಿ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ವಿನಯ ಕುಮಾರ್ ಸೊರೆಕೆ, ಅಭಯಚಂದ್ರ ಜೈನ್ , ಕಣಚೂರ್ ಮೋನು, ಮಾಜಿ ರಾಜ್ಯ ಸಭಾ ಸದಸ್ಯ ಬಿ. ಇಬ್ರಾಹಿಂ,ಮಾಜಿ ಶಾಶಕಿ ಶಕುಂತಲಾ ಶೆಟ್ಟಿ, ಉಡುಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರ್, ಮಿಥುನ್ ರೈ , ಮಾಜಿ ಶಾಸಕ ಐವಾನ್ ಡಿಸೋಜ, ಇನಾಯತ್ ಆಲಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ , ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಪದ್ಮರಾಜ್. ಆರ್, ಎಂ.ಎ.ಗಫೂರ್ ಮೊದಲಾದವರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...