ರಾಮಪಥದಲ್ಲಿ ಗುಂಡಿಗಳು, ರಾಮಮಂದಿರ ಸೋರಿಕೆ; ಬಿಜೆಪಿ ವಿರುದ್ಧ ಟೀಕೆ

Date:

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಆರು ತಿಂಗಳ ನಂತರ ಸುರಿದ ತುಂತುರು ಮಳೆ ಅಯೋಧ್ಯೆಯ ಚಿತ್ರಣವನ್ನು ಬದಲಿಸಿದೆ. ಪಟ್ಟಣವು ಜಲಾವೃತಗೊಂಡು ರಸ್ತೆಗಳು ಗುಂಡಿಬಿದ್ದಿವೆ. ರಾಮಮಂದಿರ ಛಾವಣಿ ಸೋರುತ್ತಿದೆ. ಇದು, ಅಯೋಧ್ಯೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಪ್ರಶ್ನೆಗಳು ಮತ್ತು ಚರ್ಚೆಗಳನ್ನು ಹುಟ್ಟುಹಾಕಿದೆ.

ಲೋಕಸಭಾ ಚುನಾವಣೆಯ ವಸ್ತಿಲಿನಲ್ಲಿ ತರಾತುರಿಯಲ್ಲಿ ಅರ್ಧಂಬರ್ಧ ನಿರ್ಮಾಣಗೊಂಡಿದ್ದ ರಾಮಮಂದಿರವನ್ನು ಜನವರಿ 22ರಂದು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆಗ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ಮಾಡಲಾಗಿತ್ತು. ಆದರೆ, ಆ ಸೌಂದರ್ಯ ಕಳಪೆ ಗುಣಮಟ್ಟದ್ದು ಎಂಬುದನ್ನು ಈ ವರ್ಷದ ಮೊದಲ ಮಳೆ ಬಟಾಬಯಲುಮಾಡಿದೆ. ರಾಮಮಂದಿರಕ್ಕೆ ಹೋಗಲು ಹೊಸದಾಗಿ ನಿರ್ಮಿಸಲಾಗಿದ್ದ 14 ಕಿ.ಮೀ ಉದ್ದದ ‘ರಾಮ್‌ ಫಥ್’ ಎಂಬ ರಸ್ತೆ ಉದ್ದಕ್ಕೂ ಗುಂಡಿಬಿದ್ದಿದೆ.

ವಾಹನ ಸವಾರರಿಗೆ ತೊಂದರೆಯಾಗದಂತೆ ಆ ರಸ್ತೆಯನ್ನು ಅಧಿಕಾರಿಗಳು ತಕ್ಷಣವೇ ದುರಸ್ತಿ ಮಾಡಿಸಿದ್ದಾರೆ. ಅದಾಗ್ಯೂ, ಯೋಗಿ ಆದಿತ್ಯನಾಥ್ ಸರ್ಕಾರವು ‘ನಿರ್ಲಕ್ಷ್ಯ’ದ ಆರೋಪದ ಮೇಲೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವಾಲಯದ ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ದೇವಾಲಯದ ಆವರಣದಲ್ಲಿ ನೀರು ಸಂಗ್ರಹವಾಗುತ್ತಿದೆ. ದೇವಸ್ಥಾನದ ಆವರಣದಲ್ಲಿದ್ದ ಮಳೆ ನೀರನ್ನು ಹೊರ ಹಾಕಲು ಯಾವುದೇ ವ್ಯವಸ್ಥೆ ಇಲ್ಲ” ಎಂದು ರಾಮಮಂದಿರದ ಮುಖ್ಯ ಅರ್ಚಕರು ದೂರಿದ್ದಾರೆ.

ಸೋರಿಕೆಯ ಆರೋಪವನ್ನು ತಿರಸ್ಕರಿಸಿದ ದೇವಾಲಯದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, “ದೇವಾಲಯದ ಛಾವಣಿಯಿಂದ ಗರ್ಭಗುಡಿಗೆ ‘ಒಂದು ಹನಿ ನೀರು’ ಬಂದಿಲ್ಲ. ದೇವಸ್ಥಾನದಲ್ಲಿ ಮಳೆ ನೀರು ಹರಿದು ಹೋಗಲು ಉತ್ತಮ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿರುವುದು ಕಂಡುಬಂದಿದ್ದರೂ, ದೇವಾಲಯದ ಮೊದಲ ಮಹಡಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯಿಂದಾಗಿ ಕೊಳವೆ ಪೈಪ್‌ನಿಂದ ನೀರು ಬರುತ್ತಿದೆ” ಎಂದು ರೈ ಸಮರ್ಥಿಸಿಕೊಂಡಿದ್ದಾರೆ.

“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಪೂಜಾ ಸ್ಥಳಗಳು ಕೂಡ ಬಿಜೆಪಿಗೆ ಲೂಟಿಯ ಮೂಲಗಳಾಗಿವೆ” ಎಂದು ಕಾಂಗ್ರೆಸ್‌ ಅಧ್ಯಕ್ಷ ಅಧ್ಯಕ್ಷ ಅಜಯ್ ರೈ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...