ಪ್ರಜ್ವಲ್‌ ಪ್ರಕರಣ | ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್‌ಗಾಗಿ ಎಚ್‌ಡಿಕೆ ಸಿಬಿಐ ಜಪ: ಸಚಿವ ಎಂ ಬಿ ಪಾಟೀಲ್‌ ಕಿಡಿ

Date:

ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಬೆಂಗಳೂರಿನ ತಮ್ಮ‌ ನಿವಾಸದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, “ಲೋಕಸಭಾ ಚುನಾವಣೆಯ ನಂತರ ರಾಜ್ಯ ಸ‌ರ್ಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು” ಎಂದರು.

“ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯಕ್ಕೆ ನಡೆಯುತ್ತಿರುವ ಎಸ್ಐಟಿ ತನಿಖೆ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್ಐಟಿ ತನ್ನ‌ ಕೆಲಸ ಮಾಡಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...