ಪ್ರಜ್ವಲ್‌ ಪ್ರಕರಣ ಸಿಬಿಐಗೆ ಕೊಡುವ ಅಗ‌ತ್ಯವಿಲ್ಲ, ದೇವೇಗೌಡರು ಸಿಬಿಐ ಅನ್ನು ‘ಚೋರ್‌ ಬಚಾವೋ ಸಂಸ್ಥೆ’ ಎಂದು ಕರೆದಿದ್ದು ನೆನಪಿಲ್ವಾ? ಸಿದ್ದರಾಮಯ್ಯ

Date:

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ” ಎಂದು ತಿಳಿಸಿದರು.

“ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ ಕೆ ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ ಜೆ ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಎಸ್‌ಐಟಿ ಮೇಲೆ ವಿಶ್ವಾಸವಿದೆ. ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ” ಎಂದು ವಿವರಿಸಿದರು.

“ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಾಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ. ನಾವು ನಂಬುತ್ತೇವೆ” ಎಂದರು.

“ಈ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಯಾರೂ ಭಾಗಿಯಾಗಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ” ಎಂದು ತಿಳಿಸಿದರು.

ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ

ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು” ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...