ಪ್ರಜ್ವಲ್‌ ಪ್ರಕರಣ | ಎರಡು ಸಾವಿರ ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ

Date:

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

2,144 ಪುಟಗಳ ದೋಷಾರೋಪ ಪಟ್ಟಿಯಲ್ಲಿ 123 ಸಾಕ್ಷ್ಯಗಳನ್ನು ಸಂಗ್ರಹ ಮಾಡಿ, ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಉಳಿದಂತೆ ಇನ್ನು ಎರಡು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಮುಖವಾಗಿ ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ, ಹಣ್ಣುಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ದೌರ್ಜನ್ಯ ಮಾಡಿದ್ದಾರೆ. ಪುತ್ರ ಪ್ರಜ್ವಲ್‌ ಹೊಳೆನರಸೀಪುರ, ಬೆಂಗಳೂರಿನ ಬಸವನಗುಡಿ ಮನೆಗಳಲ್ಲಿ ಅತ್ಯಾಚಾರ ನಡೆಸಿದ್ದಾರೆ. ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು” ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಅಪಹರಣ ಪ್ರಕರಣದಲ್ಲಿ ಸಮನ್ಸ್‌

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಗುರುವಾರ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಸೇರಿದಂತೆ 9 ಆರೋಪಿಗಳಿಗೆ ಆ.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

ಪ್ರಕರಣದಲ್ಲಿ ಬಂಧಿತರಾಗಿರುವ ಸತೀಶ್‌ಬಾಬು, ಮನುಗೌಡ, ಕೆ.ಎ. ರಾಜಗೋಪಾಲ್‌ ಎಚ್‌.ಕೆ. ಸುಜಯ್‌, ಎಚ್‌.ಎನ್‌. ಮಧು, ಎಸ್‌.ಟಿ. ಕೀರ್ತಿ ಮತ್ತು ಅಜಿತ್‌ ಕುಮಾರ್‌ಗೆ ಐಪಿಸಿ ಸೆಕ್ಷನ್‌ 364 ‘ಎ’ ಕೈಬಿಟ್ಟು ಉಳಿದ ಆರೋಪಿಗಳಿಗೂ ಸಮನ್ಸ್‌ ನೀಡಲಾಗಿತ್ತು.

ಆರೋಪಿ ಭವಾನಿ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠವು ಭವಾನಿ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು.

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...