ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಟ್ಟ ಸಂಗತಿ ಸಮಾಜದ ಮೇಲೆ ಪರಿಣಾಮ ಬೀರುತ್ತೆ: ಸಿ ಟಿ ರವಿ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್‌ ಡ್ರೈವ್‌ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ಟಿ ರವಿ ಸೋಮವಾರ ಮಾತನಾಡಿ, “ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಎರಡು ದಿನ ಬಾಕಿಯಿರುವಾಗ ಸಾರ್ವಜನಿಕವಾಗಿ ಇದು ಬೆಳಕಿಗೆ ಬರುತ್ತಿದ್ದಂತೆ ನಮಗೆ ಈ ವಿಷಯ ಗೊತ್ತಾಯಿತು. ಈ ಬಗ್ಗೆ ಎಚ್‌ ಡಿ ಕುಮಾರಸ್ವಾಮಿ ಅವರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ನಾವು ಅದನ್ನು ಬೆಂಬಲಿಸುತ್ತೇವೆ” ಎಂದರು.

“ಮಾಜಿ ಶಾಸಕರು ಈ ಬಗ್ಗೆ ಪತ್ರ ಬರೆದಿರುವ ವಿಚಾರ ನಮಗೆ ಗೊತ್ತಿಲ್ಲ. ನಮ್ಮ ಪಕ್ಷದ ವೇದಿಕೆಯಲ್ಲಿ ಇಂತಹ ಸಂಗತಿ ಚರ್ಚೆಯಾಗಿಲ್ಲ. ಜೆಡಿಎಸ್‌ನವರು ಎನ್‌ಡಿಎ ಭಾಗವಾಗಿದ್ದಾರೆ. ಟಿಕೆಟ್‌ ಅವರೇ ನೀಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ ಜೆಡಿಎಸ್‌ಗೆ ಸಪೋರ್ಟ್‌ ಕೊಟ್ಟಿರಲಿಲ್ವಾ? ಈ ಮೈತ್ರಿಯೂ ಹಾಗೆ. ನಾವು ಟಿಕೆಟ್‌ ನೀಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್ ಲೈಂಗಿಕ ಹಗರಣ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಕೆಟ್ಟ ಸಂಗತಿಗಳು ಸಮಾಜದ ಮೇಲೆ ಪರಿಣಾಮ ಬೀರಲ್ಲ ಎಂದರೆ ಸಮಾಜ ಸಂವೇದನೆ ಕಳೆದುಕೊಂಡಂತೆ. ಒಳ್ಳೆಯ ಸಂಗತಿಗಳು ಹೇಗೆ ಸಮಾಜದ ಮೇಲೆ ಪರಿಣಾಮ ಬೀರುತ್ತವೆಯೋ ಅಷ್ಟೇ ಕೆಟ್ಟ ಸಂಗತಿಗಳು ಕೂಡ ಪರಿಣಾಮ ಬೀರುತ್ತವೆ. ಆದರೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂಬುದು ಸುಳ್ಳು” ಎಂದು ಸಿ ಟಿ ರವಿ ಹೇಳಿದರು.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ: ಆರ್‌ ಅಶೋಕ್

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, “ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್​ಐಟಿ ರಚಿಸಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್,” ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ” ಎಂದು ಒತ್ತಾಯಿಸಿದರು.‌

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿ, “ಎಸ್​ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...