ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಮುಂದಿನ ಸಭೆಯಲ್ಲಿ ಸ್ಪಷ್ಟನೆ ನೀಡಲಿದ್ದಾರೆ ಮೋದಿ; ಬಿಜೆಪಿ ಮೂಲದಿಂದ ಮಾಹಿತಿ

Date:

ಒಂದು ವಾರದಿಂದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸೆಕ್ಸ್‌ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮತದಾನ ಮುಗಿಯುತ್ತಿದ್ದಂತೆ ಆರೋಪಿ ಪ್ರಜ್ವಲ್‌ ದೇಶ ತೊರೆದಿದ್ದಾನೆ. ಬೇರೆ ಬೇರೆ ಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ. ರಾಜ್ಯದಲ್ಲಿ ಬಿಜೆಪಿ ನಾಯಕ ಸಿಟಿ ರವಿ ಕೂಡಾ ಖಂಡಿಸಿದ್ದಾರೆ. “ಕೆಟ್ಟ ಸಂಗತಿಗಳು ಸಮಾಜದ ಮೇಲೆ ಪರಿಣಾಮ ಬೀರಲ್ಲ ಎಂದರೆ ಸಮಾಜ ಸಂವೇದನೆ ಕಳೆದುಕೊಂಡಂತೆ. ಒಳ್ಳೆಯ ಸಂಗತಿಗಳು ಹೇಗೆ ಸಮಾಜದ ಮೇಲೆ ಪರಿಣಾಮ ಬೀರುತ್ತವೆಯೋ ಅಷ್ಟೇ ಕೆಟ್ಟ ಸಂಗತಿಗಳು ಕೂಡ ಪರಿಣಾಮ ಬೀರುತ್ತವೆ” ಎಂದು ಹೇಳಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ, ಪ್ರಜ್ವಲ್‌ ಪ್ರಕರಣದ ತನಿಖೆಗೆ ಎಸ್‌ ಐಟಿ ರಚನೆ ಮಾಡಿರುವ ಸರ್ಕಾರದ ಕ್ರಮವನ್ನು ಶ್ಲಾಘಿಸಿ “ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದಾರೆ. ಆರೋಪಿಯ ರಕ್ಷಣೆ ಮಾಡಲ್ಲ ಎಂದಿದ್ದಾರೆ. “ಸರ್ಕಾರ ಯಾವುದೇ ರೀತಿಯ ತನಿಖೆ ನಡೆಸಿದರೂ ಸ್ವಾಗತಿಸುತ್ತೇವೆ, ಸತ್ಯ ಹೊರಬರಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ” ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಈ ಮಧ್ಯೆ ಇಂದು(ಏ.೨೯) ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಅವರು ಸಂಸದ ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಈ ಮಧ್ಯೆ ಪ್ರಕರಣ ಸಂಬಂಧ ಎಫ್‌ಐಆರ್‌ ಆದ ದಿನವೇ ಪ್ರಧಾನಿ ಮೋದಿ ಅವರು ಎರಡನೇ ಸುತ್ತಿನ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಿದ್ದರು. ಆದರೆ ಪ್ರಜ್ವಲ್‌ ಪ್ರಕರಣದ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ಅವರು ಮೈತ್ರಿ ಅಭ್ಯರ್ಥಿಯಾಗಿರುವ ಕಾರಣ ಪ್ರಜ್ವಲ್‌ ರೇವಣ್ಣ ಪರವೂ ಮತಯಾಚನೆ ಮಾಡಿದ್ದರು. ವೇದಿಕೆಯಲ್ಲಿ ಪ್ರಜ್ವಲ್‌ ಕೂಡಾ ಕಾಣಿಸಿಕೊಂಡಿದ್ದರು. ಆದರೆ ಇದೀಗ ತಮ್ಮ ಅಭ್ಯರ್ಥಿಯ ಕೃತ್ಯವನ್ನು ಖಂಡಿಸುವುದಾಗಲಿ, ತನಿಖೆಗೆ ಒತ್ತಾಯಿಸುವುದಾಗಲಿ ಮಾಡಿಲ್ಲ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಕಾಂಗ್ರೆಸ್‌ ನಾಯಕರು ಮೋದಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಎಸ್‌ಐಟಿ ರಚನೆಯಾದ ನಂತರ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ಕೊಟ್ಟು ಜಾರಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ ಈ ಪ್ರಕರಣದ ಬಗ್ಗೆ ಟಿಎಂಸಿಯ ನಾಯಕಿ ಸಾಗರಿಕಾ ಘೋಷ್‌, ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಲಕಾ ಲಂಬಾ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, “ಮಹಿಳಾ ದೌರ್ಜನ್ಯದ ದಾಖಲೆ ಮುರಿದ ಪ್ರಜ್ವಲ್‌ ಮೋದಿಯವರ ಪರಿವಾರದ ಸದಸ್ಯ” ಎಂದು ಟೀಕಿಸಿದ್ದಾರೆ. ಜನಪರ ಚಳುವಳಿಗಳ ಒಕ್ಕೂಟ ‘ವಿಕೃತ ಕಾಮ ಪಿಶಾಚಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿʼ ಎಂದು ಒತ್ತಾಯಿಸಿವೆ.

ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ ಕೂಡಾ, ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಒಂದು ವರ್ಷದ ಮೊದಲೇ ಈ ವಿಚಾರ ಗೊತ್ತಿದ್ದೂ ಮೈತ್ರಿ ಅಭ್ಯರ್ಥಿ ಮಾಡಲಾಗಿದೆ. ಪ್ರಧಾನಿ ಮೋದಿ ಆ ಆರೋಪಿಯ ಪರ ಮತಯಾಚನೆ ಮಾಡಿದ್ದರು. ಈಗ ಈ ಪ್ರಕರಣದ ಬಗ್ಗೆ ಮೋದಿ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ಮೌನ ಮತ್ತು ಮುಸ್ಲಿಂ ಆರೋಪಿ ಇದ್ದಾಗ ಮಾತ್ರ ಖಂಡಿಸುವ ಪ್ರತಿಭಟಿಸುವ ದುಷ್ಟ ನಡೆಯ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ ಪ್ರಜ್ವಲ್‌ ಪ್ರಕರಣದ ಬಗ್ಗೆ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೋದಿಯವರಿಂದಲೇ ಮಾತನಾಡಿಸಿ ಮುಜುಗರದಿಂದ ತಪ್ಪಿಸಿಕೊಳ್ಳಲು ರಾಜ್ಯ ಬಿಜೆಪಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...