ಪ್ರಜ್ವಲ್ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ: ಜಿ ಟಿ ದೇವೇಗೌಡ ಆಗ್ರಹ

Date:

ಪೆನ್‌ಡ್ರೈವ್‌ ಪ್ರಕರಣದ ತನಿಖೆಯನ್ನು ಸಿಬಿಐಗೆ ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ ನ್ಯಾಯಾಧೀಶರಿಂದಲೇ ಪ್ರಕರಣದ ತನಿಖೆ ನಡೆಸಬೇಕು ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಆಗ್ರಹಿಸಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಪೆನ್‌ಡ್ರೈವ್ ಹಂಚಿದವರನ್ನೂ ಬಂಧಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ್ದನ್ನು ಮೊದಲ ದಿನವೇ ಜೆಡಿಎಸ್‌ ಸ್ವಾಗತಿಸಿದ್ದು, ನ್ಯಾಯ ಸಮ್ಮತ ತನಿಖೆಗೆ ಒತ್ತಾಯಿಸಿದ್ದೆವು. ಆದರೆ ಇಡೀ ಪ್ರಕರಣ ವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಡಿ ಕೆ ಶಿವಕುಮಾರ್ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿದವರು ಸಹ ಶಿಕ್ಷೆಗೆ ಅರ್ಹರು. ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ ಕೆ ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಕೂಡಲೇ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಶಿವರಾಮೇಗೌಡ, ಡಿಕೆಶಿ ಆಡಿಯೊ ಬಗ್ಗೆ ಕೂಡ ನ್ಯಾಯಾಂಗ ತನಿಖೆಯಾಗಬೇಕು” ಎಂದರು.

ಪೊಲೀಸರಿಂದಲೂ ಷಡ್ಯಂತ್ರ : ಸಾ ರಾ ಆರೋಪ

“ರೇವಣ್ಣ ವಿರುದ್ಧ ಆರೋಪ ಮಾಡಿರುವ ಮಹಿಳೆಯನ್ನು ರೇವಣ್ಣ ಆಪ್ತ ರಾಜಗೋಪಾಲ್ ಎಂಬುವರ ತೋಟದ ಮನೆಯಿಂದ ರಕ್ಷಣೆ ಮಾಡಲಾಗಿದೆ ಎಂಬುದು ಸುಳ್ಳು. ಈ ಬಗ್ಗೆ ವಿಡಿಯೊ ಸಮೇತ ಪೊಲೀಸರು ದಾಖಲೆ ನೀಡಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ” ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ಸವಾಲು ಹಾಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...