ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ | ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್‌ ಆದೇಶ

Date:

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ತನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ಅನ್ನು ರದ್ದು ಮಾಡುವಂತೆ ಕೋರಿ ಪ್ರೀತಂ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠವು, ಮಾಜಿ ಶಾಸಕರನ್ನು ಬಂಧಿಸದಂತೆ ಎಸ್‌ಐಟಿಗೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣಕ್ಕೆ ಸಂಬಂಧಿಸಿ ಅರ್ಜಿದಾರ ಪ್ರೀತಂ ಗೌಡ ಅವರನ್ನು ಬೆಳಗ್ಗೆ 7ರಿಂದ ಸಂಜೆ 9ರವರೆಗೆ  ವಿಚಾರಣೆಗೆ ಒಳಪಡಿಸಬಹುದು. ಯಾವುದೇ ದಾಖಲೆ ಬೇಕಾದರೂ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆಯಬಹುದು. ಆದರೆ, ಅವರನ್ನು ಬಂಧಿಸುವಂತಿಲ್ಲ” ಎಂದ ಪೀಠ ಆದೇಶ ಹೊರಡಿಸಿದೆ.

ಇದಕ್ಕೆ ಆಕ್ಷೇಪಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್‌, “ಎಲ್ಲ ಪ್ರಕರಣಗಳ ವಿಚಾರಣೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿದರೆ ಹೇಗೆ?” ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ನ್ಯಾಯಪೀಠವು, “ಎಸ್‌ಐಟಿ ವೇದನೆಯನ್ನು ದಾಖಲೆಯಲ್ಲಿ ಸೇರ್ಪಡೆ ಮಾಡಲಾಗಿದೆ” ಎಂದು ಉತ್ತರಿಸಿದ ಪೀಠವು, “ಪೊಲೀಸ್‌ ರಾಜ್‌ ಮಾಡಲು ಅವಕಾಶ ನೀಡಲಾಗದು” ಎಂದು ಸ್ಪಷ್ಟಪಡಿಸಿತು.

ನಾಲ್ಕನೇ ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಐಟಿ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿತ್ತು.

ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಸಂತ್ರಸ್ತೆಯೋರ್ವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರೀತಂ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಹೀಗಾಗಿ, ಎಸ್‌ಐಟಿ ಅಧಿಕಾರಿಗಳು ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...